ಚಲಿಸುತ್ತಿದ್ದ ರೈಲಿನಿಂದ ಬಿದ್ದು ೬ ಮಂದಿ ಸಾವು

ಥಾಣೆ, ಜೂ. ೯: ಮಹಾರಾಷ್ಟçದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದು ತುಂಬಿದ್ದ ಲೋಕಲ್ ರೈಲಿನಿಂದ ಬಿದ್ದು ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಕಾಲಿಡಲು ಜಾಗವಿಲ್ಲದಷ್ಟು ಕಿಕ್ಕಿರಿದು ತುಂಬಿದ್ದ ರೈಲು ಕಾಸರ ಕಡೆಗೆ ಹೋಗುತ್ತಿದ್ದಾಗ ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೆಚ್ಚಿನ ಪ್ರಯಾಣಿಕರಿಂದ ತುಂಬಿದ ರೈಲಿನಲ್ಲಿ ಅನೇಕ ಜನರು ಬಾಗಿಲುಗಳಲ್ಲಿ ನಿಂತು ನೇತಾಡುತ್ತಿದ್ದರು. ರೈಲು ಚಲಿಸುತ್ತಿದ್ದಂತೆಯೇ ೧೦ ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ. ಈ ಪೈಕಿ ಆರು ಮಂದಿ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬೆಳಿಗ್ಗೆ ೯.೩೦ ರ ಸುಮಾರಿನಲ್ಲಿ ಥಾಣೆಯ ದಿವಾದಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟವರ ಕುಟುಂಬಕ್ಕೆ ಮಹಾರಾಷ್ಟç ಸರ್ಕಾರ ತಲಾ ೫ ಲಕ್ಷ ರೂ. ಪರಿಹಾರ ನೀಡಲಿದೆ ಎಂದು ಸಚಿವ ಗಿರೀಶ್ ಮಹಾಜನ್ ಹೇಳಿದ್ದಾರೆ.

‘ತುಮಕೂರನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಲು ಪ್ರಸ್ತಾವನೆ’

ಬೆಂಗಳೂರು, ಜೂ. ೯: ತುಮಕೂರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ವ್ಯಾಪ್ತಿಗೆ ಸೇರಿಸಲು ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಸೋಮವಾರ ಹೇಳಿದ್ದಾರೆ. ್ಲ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಿAದ ಸುಮಾರು ೭೦ ಕಿ.ಮೀ ದೂರದಲ್ಲಿರುವ ತುಮಕೂರು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಗಮನಸೆಳೆದರು. ೨೦,೦೦೦ ಎಕರೆ ಪ್ರದೇಶದಲ್ಲಿ(ತುಮಕೂರಿನಲ್ಲಿ) ಕೈಗಾರಿಕಾ ಕೇಂದ್ರವಿದೆ. ಬೆಂಗಳೂರಿನAತೆ ತುಮಕೂರನ್ನು ವಿಸ್ತರಿಸಬೇಕೆಂದು ಹಲವರು ಒತ್ತಾಯಿಸುತ್ತಿದ್ದಾರೆ. ಈ ವಿಷಯದ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಕಾಲ್ತುಳಿತ ಪ್ರಕರಣ - ಅರ್ಜಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ

ಬೆಂಗಳೂರು, ಜೂ. ೯: ಕಾಲ್ತುಳಿತ ಘಟನೆಯಲ್ಲಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಪ್ರಶ್ನಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆAಟ್ ಪ್ರೆöÊವೇಟ್ ಲಿಮಿಟೆಡ್ ಸಲ್ಲಿಸಿರುವ ಅರ್ಜಿಗಳನ್ನು ತಾ. ೧೦ ರಂದು ವಿಚಾರಣೆ ನಡೆಸುವುದಾಗಿ ಕರ್ನಾಟಕ ಹೈಕೋರ್ಟ್ ಸೋಮವಾರ ತಿಳಿಸಿದೆ. ೧೮ ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಜೂನ್ ೪ ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ೧೧ ಜನರು ಸಾವಿಗೀಡಾಗಿದ್ದಾರೆ. ಆರ್‌ಸಿಬಿ ಮತ್ತು ಡಿಎನ್‌ಎ ಎಂಟರ್‌ಟೈನ್‌ಮೆAಟ್ ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ಪ್ರಶ್ನಿಸಿ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿವೆ.

ಸೌದಿ ಅರೇಬಿಯಾಕ್ಕೆ ಭಾರತೀಯರಿಗೆ ನಿರ್ಬಂಧ ಸುಳ್ಳು

ನವದೆಹಲಿ, ಜೂ. ೯: ಸೌದಿ ಅರೇಬಿಯಾ ಪ್ರಯಾಣಿಸುವ ಭಾರತೀಯರಿಗೆ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಸುಳ್ಳು ಎಂದು ಸರ್ಕಾರದ ಮೂಲಗಳು ಸೋಮವಾರ ಖಚಿತಪಡಿಸಿವೆ. ಈ ವಿಷಯದಲ್ಲಿ ಸೌದಿ ಸರ್ಕಾರ ಯಾವುದೇ ಅಧಿಸೂಚನೆ ಪ್ರಕಟಿಸಿಲ್ಲ ಎಂದೂ ಹೇಳಲಾಗಿದೆ. ಆದರೆ ಸೌದಿ ಸರ್ಕಾರ ಭಾರತೀಯ ಪ್ರಯಾಣಿಕರಿಗೆ ನಿರ್ಬಂಧ ಹೇರಿದೆ ಎಂದು ಕೆಲವೆಡೆ ವರದಿಯಾಗಿತ್ತು. ಅದಕ್ಕೆ ಸ್ಪಷ್ಟಿಕರಣ ನೀಡಲಾಗಿದೆ. ಹಜ್ ಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಅಲ್ಪಾವಧಿಗೆ ವಿಸಾ ತಡೆಹಿಡಿಯುವ ಪದ್ಧತಿ ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಹಜ್ ಅವಧಿ ಮುಗಿಯುತ್ತಿದ್ದಂತೆ ಅದು ಕೊನೆಗೊಳ್ಳುತ್ತದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

‘ಥಗ್ ಲೈಫ್’ಗೆ ಹಿನ್ನಡೆ

ಬೆಂಗಳೂರು, ಜೂ. ೯: ದಕ್ಷಿಣ ಭಾರತದ ಪ್ರಸಿದ್ಧ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಚಿತ್ರ ಬಿಡುಗಡೆಯ ಬಗ್ಗೆ ಉಂಟಾಗಿರುವ ವಿವಾದ ಇದೀಗ ಸುಪ್ರೀಂ ಕೋರ್ಟ್ ಬಾಗಿಲಿಗೆ ತಲುಪಿತ್ತು. ಆದರೆ, ಸುಪ್ರೀಂ ಕೋರ್ಟ್ ತುರ್ತು ವಿಚಾರಣೆ ನಿರಾಕರಿಸಿ, ಸಮಸ್ಯೆ ಕರ್ನಾಟಕ ಹೈಕೋರ್ಟ್ನಲ್ಲೇ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸೂಚಿಸಿದೆ. ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂಬ ಕಮಲ್ ಹಾಸನ್ ನೀಡಿದ್ದ ಹೇಳಿಕೆ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕನ್ನಡಿಗರು ಹಾಗೂ ಸಂಘಟನೆಗಳು ಚಿತ್ರ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿದವು. ಇದರಿಂದ ಪ್ರಭಾವಿತವಾಗಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚಿತ್ರ ಬಿಡುಗಡೆಗೆ ನಿಷೇಧ ಹೇರಿತ್ತು. ಕಮಲ್ ಹಾಸನ್ ಪರ ವಕೀಲರು ಹೈಕೋರ್ಟ್ನನಲ್ಲಿ ಈ ನಿಷೇಧದ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಕಮಲ್ ಹಾಸನ್ ಅವರನ್ನು ಗಂಭೀರವಾಗಿ ತರಾಟೆಗೆ ತೆಗೆದುಕೊಂಡಿತು. ಚಿತ್ರ ಬಿಡುಗಡೆ ತಾತ್ಕಾಲಿಕವಾಗಿ ನಿಲ್ಲಿಸುವಂತೆ ಆದೇಶ ನೀಡಿತ್ತು. ಈ ತಾತ್ಕಾಲಿಕ ನಿರ್ಬಂಧವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೊರೆ ಹೋದರೂ, ಅದರಿಂದ ಕಮಲ್ ಹಾಸನ್‌ಗೆ ಮತ್ತೊಂದು ಹಿನ್ನಡೆ ಎದುರಾಗಿದೆ.

ಮೋದಿ ಸರಕಾರದ ವಿರುದ್ಧ ರಾಹುಲ್ ವಾಗ್ದಾಳಿ

ನವದೆಹಲಿ, ಜೂ. ೯: ೧೧ ವರ್ಷಗಳ ಆಡಳಿತದಲ್ಲಿ ಮೋದಿ ಸರ್ಕಾರವು ಯಾವುದೇ ಹೊಣೆಗಾರಿಕೆಯನ್ನು ಪ್ರದರ್ಶಿಸಲಿಲ್ಲ. ಬರೀ ಅಪಪ್ರಚಾರದಲ್ಲೇ ಕಾಲ ಕಳೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. ವಾಸ್ತವದ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿರುವ ಕೇಂದ್ರ ಸರ್ಕಾರವು, ಈಗ ೨೦೪೭ರ ಕನಸುಗಳನ್ನು ಮಾರಾಟ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಮಹರಾಷ್ಟçದ ಠಾಣೆ ಜಿಲ್ಲೆಯಲ್ಲಿ ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಲೋಕಲ್ ಟ್ರೇನ್‌ನಿಂದ ಬಿದ್ದು, ನಾಲ್ವರು ಮೃತಪಟ್ಟು, ೬ ಮಂದಿ ಗಾಯಗೊಂಡ ಘಟನೆ ಉಲ್ಲೇಖಿಸಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ‘ಎಕ್ಸ್’ನಲ್ಲಿ ಹಿಂದಿ ಭಾಷೆಯಲ್ಲಿ ಪೋಸ್ಟ್ ಮಾಡಿರುವ ಅವರು, ದೇಶಕ್ಕೆ ೧೧ ವರ್ಷಗಳು ಸೇವೆ ಮಾಡಿರುವುದಾಗಿ ಮೋದಿ ಸರ್ಕಾರ ಸಂಭ್ರಮಿಸುತ್ತಿದೆ. ದೇಶದ ವಾಸ್ತವವನ್ನು ಮುಂಬೈನಿAದ ಬರುತ್ತಿರುವ ದುರಂತದ ಸುದ್ದಿಯು ಪ್ರತಿಬಿಂಬಿಸುತ್ತಿದೆ. ರೈಲಿನಿಂದ ಬಿದ್ದು ಹಲವು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.

ಹನಿಮೂನ್‌ನಲ್ಲಿ ಹತ್ಯೆ ಪ್ರಕರಣ : ಪತಿ ಬಂಧನ

ಮೇಘಾಲಯ, ಜೂ. ೯: ಮೇಘಾಲಯ ಹನಿಮೂನ್ ಹತ್ಯೆ ಪ್ರಕರಣ ದೊಡ್ಡ ತಿರುವು ಪಡೆದುಕೊಂಡಿದ್ದು, ರಾಜ ರಘುವಂಶಿ ಕೊಲೆಗೆ ಪತ್ನಿ ಸೋನಮ್ ರಘುವಂಶಿಯೇ ಸಂಚು ರೂಪಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಈ ಕೊಲೆ ಅಕ್ರಮ ಸಂಬAಧವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೇ ೧೧ ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ರಾಜ ರಘುವಂಶಿ ಮತ್ತು ಸೋನಮ್ ದಂಪತಿ ಮೇ ೨೦ ರಂದು ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದರು. ಅವರು ಮೇ ೨೨ ರಂದು ಬಾಡಿಗೆ ಸ್ಕೂಟರ್‌ನಲ್ಲಿ ಮೌಲಾಖಿಯಾತ್ ಗ್ರಾಮಕ್ಕೆ ಬಂದಿದ್ದರು. ಮೇ ೨೩ ರಂದು ದಂಪತಿ ನಾಪತ್ತೆಯಾಗಿದ್ದು, ಜೂನ್ ೨ ರಂದು ರಾಜ ರಘುವಂಶಿ ಅವರ ಶವ ಆಳವಾದ ಕಂದಕದಲ್ಲಿ ಪತ್ತೆಯಾಗಿತ್ತು. ನಂತರ ಜೂನ್ ೮ ರಂದು ಉತ್ತರ ಪ್ರದೇಶದ ಘಾಜಿಪುರದಲ್ಲಿ ಪತ್ನಿ ಸೋನಮ್‌ರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಸಿಕ್ಕಿಂನಲ್ಲಿ ಭೂಕುಸಿತ - ನಾಪತ್ತೆಯಾಗಿದ್ದ ಸೇನಾ ಸಿಬ್ಬಂದಿ ಮೃತದೇಹ ಪತ್ತೆ

ಗ್ಯಾಂಗ್‌ಟಾಕ್, ಜೂ. ೯: ಈ ತಿಂಗಳ ಆರಂಭದಲ್ಲಿ ಉತ್ತರ ಸಿಕ್ಕಿಂನ ಚಾಟೆನ್‌ನ ಸೇನಾ ಶಿಬಿರದಲ್ಲಿ ಭೂಕುಸಿತ ಸಂಭವಿಸಿದ ನಂತರ ನಾಪತ್ತೆಯಾಗಿದ್ದ ಆರು ಸೇನಾ ಸಿಬ್ಬಂದಿಯ ಪೈಕಿ ಒಬ್ಬ ಸಿಬ್ಬಂದಿಯ ಮೃತದೇಹವನ್ನು ಸೋಮವಾರ ಮಂಗನ್ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹುತಾತ್ಮ ಯೋಧನನ್ನು ಸೈನುದ್ಧೀನ್ ಪಿಕೆ ಎಂದು ಗುರುತಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕಾಣೆಯಾದ ಇತರ ಸೇನಾ ಸಿಬ್ಬಂದಿಯನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಂಗನ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಸೋನಮ್ ಡೆಟ್ಚು ಭುಟಿಯಾ ಅವರು ತಿಳಿಸಿದ್ದಾರೆ.