ಮಡಿಕೇರಿ ಜೂ. ೯: ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು.

ವಿಚಾರಣೆಯ ಮುಂದಿನ ದಿನಾಂಕವನ್ನು ೨೦೨೫ ಜು.೨೩ ಕ್ಕೆ ನ್ಯಾಯಾಧೀಶರು ಮುಂದೂಡಿದರು. ಸಿಎಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-೨ ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ ೧, ೨ ಮತ್ತು ೩ ಎಂದು ಉಲ್ಲೇಖಿಸಲಾಗಿದೆ.

ಹೈಕೋರ್ಟ್ ವಕೀಲರಾದ ಕೀರನ್ ನಾರಾಯಣ್ ಅವರು ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಎನ್.ಯು.ನಾಚಪ್ಪ ಅವರ ಪರವಾಗಿ ನ್ಯಾಯಾಲಯದಲ್ಲಿ ಹಾಜರಿದ್ದರು.