‘ಶಕ್ತಿ’ಗೆ ೫ ವಿಭಾಗಗಳಲ್ಲಿ ಪ್ರಶಸ್ತಿ
ಮಡಿಕೇರಿ, ಜೂ. ೯: ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿAದ ನೀಡಲಾಗುವ ೨೦೨೪ನೇ ಸಾಲಿನ ೧೮ ವಿಭಾಗಗಳ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದ್ದು, ಈ ಪೈಕಿ ‘ಶಕ್ತಿ’ ೫ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ.
ಇಂದಿರಾ ಸತ್ಯನಾರಾಯಣ ಅವರು ತಮ್ಮ ತಂದೆ ಸಾಹಿತಿ ದಿವಂಗತ ಡಿ.ಕೃಷ್ಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸಾಂಸ್ಕೃತಿಕ ವರದಿ ಪ್ರಶಸ್ತಿ ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಸಿನಿಮಾಗೀತೆಗೆ ಧ್ವನಿಯಾದ ಕೊಡಗಿನ ಕಾಡುಮಕ್ಕಳು’ ವರದಿಗೆ ‘ಶಕ್ತಿ’ ಉಪಸಂಪಾದಕ ಹೆಚ್.ಜೆ. ರಾಕೇಶ್ ಪಡೆದು ಕೊಂಡಿದ್ದಾರೆ.
ಪAದ್ಯAಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಒಂದೇ ಊರು ಮೂರು ಚೆಕ್ ಡ್ಯಾಂ' ವರದಿಗೆ ಅಣ್ಣೀರ ಹರೀಶ್ ಮಾದಪ್ಪ, ನಿವೃತ್ತ ವಾರ್ತಾಧಿಕಾರಿ
(ಮೊದಲ ಪುಟದಿಂದ) ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಆನೆಚೌಕೂರು ಗಡಿ-ಅಕ್ರಮ ಸಾಗಾಟಕ್ಕೆ ರಾಜಮಾರ್ಗ’ ವರದಿಗೆ ಹೆಚ್.ಕೆ.ಜಗದೀಶ್, ಕೈಬುಲೀರ ಪಾರ್ವತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಸರಕಾರಗಳಿಗೆ ಕೇಳಿಸದಾಯಿತೇ ಕಾವೇರಿ ಕೂಗು’ ವರದಿಗೆ ಎಂ.ಎನ್.ಚAದ್ರಮೋಹನ್, ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಮೂರು ತಲೆಮಾರಿನ ದೇಶಿಯ ನಾಟಿ ಪದ್ಧತಿ’ ವರದಿಗೆ ಕಿಶೋರ್ ಕುಮಾರ್ ಶೆಟ್ಟಿ ಪಡೆದುಕೊಂಡಿದ್ದಾರೆ.
ಸಂಘದ ಮಾಜಿ ಉಪಾಧ್ಯಕ್ಷ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ವಿಸ್ತಾರ ಚಾನಲ್ನಲ್ಲಿ ಪ್ರಸಾರವಾಗಿರುವ ‘ಹಸಿರ ವನಸಿರಿಗೆ ಚಂದದ ಹೊದಿಕೆ, ಸುದ್ದಿಯ ವೀಡಿಯೋಗ್ರಾಫಿಗೆ ಮನೋಜ್ ಆರ್.ಆರ್. ಹಾಗೂ ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ‘ದಟ್ಟ ಅರಣ್ಯದೊಳಗೆ ಜಲಲ ಜಲಲ ಜಲಧಾರೆ’ ವರದಿಯ ವೀಡಿಯೋ ಗ್ರ್ರಾಫಿಗೆ ಸಂತೋಷ್ ರೈ ಹಂಚಿ ಕೊಂಡಿದ್ದಾರೆ.
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ ‘ಹೊಟ್ಟೆಪಾಡಿಗಾಗಿ ಆನೆ-ಮಾನವ ಸಂಘರ್ಷ’ ಹಾಗೂ ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷÀ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ ‘ಹೈನುಗಾರಿಕೆಯಲ್ಲಿ ಯಶ ಕಂಡ ಸಹೋದರರು’ ಎಂಬ ವರದಿಗಳಿಗೆ ಹೆಚ್.ಇ.ರವಿ, ಪಡೆದುಕೊಂಡಿದ್ದಾರೆ.
ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ರಜೆಯಲ್ಲಿ ಮೈದಳೆದ ಈಜುಕೊಳ’ ಹಾಗೂ ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಕೃಷಿಯಲ್ಲಿ ಸಹೋದರರ ಕಮಾಲ್’ ವರದಿಗೆ ದಿನೇಶ್ ಮಾಲಂಬಿ ತಮ್ಮದಾಗಿಸಿ ಕೊಂಡಿದ್ದಾರೆ.
ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ “ರಾಸುಗಳಿಗೆ ಉರುಳು ಕಂಟಕ”, ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜ ಕೋಟೆರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ ಪ್ರಶಸ್ತಿಯನ್ನು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ‘ಕಾರೆಕಂಡಿ ಹಾಡಿಯಲ್ಲಿ ಶತಾಯುಷಿಗಳು’ ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತಾದ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ‘ದಕ್ಷಿಣ ಕೊಡಗಿನಲ್ಲಿ ತಪ್ಪದ ಹುಲಿ ಭೀತಿ’ ವರದಿಗೆ ಜಗದೀಶ್ ಜೋಡುಬೀಟಿ ಪಡೆದುಕೊಂಡಿದ್ದಾರೆ.
ಸAಘದ ಮಾಜಿ ಅಧ್ಯಕ್ಷ ಕೆ.ಕೆ. ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ವಾರ್ತಾಭಾರತಿ ಪತ್ರಿಕೆಯಲ್ಲಿ ಪ್ರಕಟವಾದ' ‘ಕೊಡಗಿನ ಕ್ರೀಡಾಕಲಿಗಳಿಗೆ ಕಾಡುತ್ತಿರುವ ದೈಹಿಕ ಶಕ್ತಿ ಕೊರತೆ’ ವರದಿಗೆ ಇಸ್ಮಾಯಿಲ್ ಕಂಡಕೆರೆ, ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ದ್ಯಾವಮ್ಮ ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಯನ್ನು ಟಿವಿ೯ ನಲ್ಲಿ ಪ್ರಸಾರವಾದ ‘ಟಿಂಬರ್ ಮಾಫಿಯಾ ಅರಣ್ಯಕ್ಕೆ ಕೊಳ್ಳಿ' ವರದಿಗೆ ಐಮಂಡ ಗೋಪಾಲ್ ಸೋಮಯ್ಯ, ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬAಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ರಿಪಬ್ಲಿಕ್ ಕನ್ನಡ ಚಾನಲ್ನಲ್ಲಿ ಪ್ರಸಾರವಾದ ‘ತಂದೆಗೆ ತಕ್ಕ ಮಗ ನಂದಾ ಕಾರ್ಯಪ್ಪ ವರದಿಗೆ' ಬಾಚರಣಿಯಂಡ ಅನು ಕಾರ್ಯಪ್ಪ, ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿವಂಗತ ಟಿ.ಕೆ. ಸುಬ್ರಮಣ್ಯ ಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ‘ಅಮ್ಮಾ ನಿನ್ನ ಬಿಸಿ ಅಪ್ಪುಗೆಯಲ್ಲಿ' ವರದಿಗೆ ಶಿವರಾಜ್, ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ. ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸುದ್ದಿ ಛಾಯಾ ಚಿತ್ರ ಪ್ರಶಸ್ತಿಯನ್ನು ಸ್ಟಾರ್ ಆಫ್ ಮೈಸೂರು ಪತ್ರಿಕೆಯಲ್ಲಿ ಪ್ರಕಟವಾದ ‘ತಂಗ್ಕಾ’ ವರದಿಯ ಚಿತ್ರಕ್ಕೆ ಪಿ.ವಿ. ಅಕ್ಷಯ್ ಪಡೆದುಕೊಂಡಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದ್ದಾರೆ.