ಪೊನ್ನಂಪೇಟೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊನ್ನಂಪೇಟೆ ನಾಯಾಲಯದ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಪೊನ್ನಂಪೇಟೆ ಜೆಎಂಎಫ್‌ಸಿ ನ್ಯಾಯಲಯದ ನ್ಯಾಯಾಧೀಶರ ನೇತೃತ್ವದಲ್ಲಿ ಪೊನ್ನಂಪೇಟೆ ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ, ಉಪವಲಯ ಅರಣ್ಯಾಧಿಕಾರಿಗಳಾದ ದಿವಾಕರ, ನಾಗೇಶ್, ಸಂದೇಶ, ಗಸ್ತು ಅರಣ್ಯ ಪಾಲಕರುಗಳಾದ ಅಂಥೋಣಿ ಪ್ರಕಾಶ್, ಸೋಮಣ್ಣ ಗೌಡ, ಆರ್.ಆರ್.ಟಿ. ಸಿಬ್ಬಂದಿ ಹಾಗೂ ಎಲ್ಲಾ ವಕೀಲರು ಪಾಲ್ಗೊಂಡಿದ್ದರು.ಪೊನ್ನAಪೇಟೆ : ಪೊನ್ನಂಪೇಟೆ ಹಳ್ಳಿಗಟ್ಟು ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕಾಲೇಜಿನ ಆವರಣದಲ್ಲಿ ಔಷಧೀಯ ಗುಣವನ್ನು ಹೊಂದಿರುವ ಸಸಿ ನೆಡಲಾಯಿತು. ಈ ಕಾರ್ಯಕ್ರಮವನ್ನು ಸಿ.ಐ.ಟಿ. ಕಾಲೇಜಿನ ಇಕೋ ಕ್ಲಬ್ ಮತ್ತು ಎನ್ ಎಸ್ ಎಸ್ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಿ.ಐ.ಟಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಬಸವರಾಜ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಆರೋಗ್ಯಕರ ವಾತಾವರಣವನ್ನು ಸೃಷ್ಟಿಸಲು ಭೂಮಿಯನ್ನು ಹಸಿರಾಗಿಸುವುದು ಅವಶ್ಯಕವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಗಿಡ ಮರವನ್ನು ಬೆಳೆಸಬೇಕು. ಪ್ರಕೃತಿಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಬೇಕು. ಹಾಗೆಯೇ ನಾವು ಕೈಗೊಳ್ಳುವ ಅಭಿವೃದ್ಧಿ ಕಾರ್ಯಗಳು ಪರಿಸರ ಸ್ನೇಹಿಯಾಗಿರಬೇಕು. ಪರಿಸರದಲ್ಲಿರುವ ಪ್ರತಿಯೊಂದು ಜೀವಸಂಕುಲಗಳು ಸ್ವಚ್ಚಂದವಾಗಿ ಬದುಕಲು ಪೂರಕವಾದ ವಾತಾವರಣವನ್ನು ನಾವು ಸೃಷ್ಟಿಮಾಡಬೇಕು ಎಂದು ತಿಳಿಸಿದರು. ಈ ಸಂದರ್ಭ ಉಪನ್ಯಾಸಕರಾದ ಡಾ.ದಿವಾಕರ್ .ಎಸ್.ಎಸ್, ಡಾ.ರಾಮಕೃಷ್ಣ .ಬಿ.ಬಿ, ಇಕೋ ಕ್ಲಬ್‌ನ ಸಂಯೋಜಕರಾದ ಕಾರ್ತಿಕ್ ಪೂವಯ್ಯ, ಎನ್.ಎಸ್.ಎಸ್. ಘಟಕದ ಸಂಯೋಜಕರಾದ ಪವನ್ ಕುಮಾರ್, ಬೋಧಕ ಮತ್ತು ಬೋಧಕೇತರ ವೃಂದ ಪಾಲ್ಗೊಂಡಿದ್ದರು.

ನೆಲ್ಯಹುದಿಕೇರಿ: ಇಲ್ಲಿನ ಎಸ್ ಎಸ್ ಎಫ್, ಎಸ್ ವೈ ಎಸ್, ಕೆ ಎಂ ಜೆ, ವತಿಯಿಂದ ಸ್ಥಳೀಯ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನದಲ್ಲಿ ಗಿಡನೆಟ್ಟರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಎಸ್‌ಎಸ್‌ಎಫ್ ಕಾರ್ಯದರ್ಶಿ ಜುನೈದ್ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಶನಿವಾರಸಂತೆ: ಪಟ್ಟಣದ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆಯ ಆವರಣದಲ್ಲಿ ನಿಸರ್ಗಸಿರಿ ಇಕೋ ಕ್ಲಬ್ ವತಿಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಿದರು. ನಿಸರ್ಗಸಿರಿ ಇಕೋ ಕ್ಲಬ್ ಸಂಚಾಲಕಿ ಎಂ. ಸವಿತಾ, ಮುಖ್ಯಶಿಕ್ಷಕ ಟಿ.ಪಿ. ಶಿವಪ್ರಕಾಶ್, ಶಿಕ್ಷಕರಾದ ಸುಚಿತ್ರಾ, ಅಂಜನಪ್ಪ, ಶ್ರೀಕಲಾ, ಇತರರು ಹಾಜರಿದ್ದು ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಿದರು.ಕಡಂಗ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡಂಗದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ತಮ್ಮ ತಮ್ಮ ತಾಯಂದಿರ ಹೆಸರಿನಲ್ಲಿ ಒಂದೊAದು ಗಿಡವನ್ನು ನೆಟ್ಟರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷೆ ಫಾತಿಮಾ, ಶಾಲಾ ಪ್ರಬಾರ ಮುಖ್ಯಶಿಕ್ಷಕಿ ವಿಮಲಾ ಕೆ.ಎಂ., ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.ವೀರಾಜಪೇಟೆ : ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವೀರಾಜಪೇಟೆಯ ಜೂನಿಯರ್ ಕಾಲೇಜುವಿನಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ವೀರಾಜಪೇಟೆ ಸರಕಾರಿ ಜೂನಿಯರ್ ಕಾಲೇಜಿನ ಎನ್.ಎಸ್.ಎಸ್. ಘಟಕ, ಕಾಲೇಜು ಮತ್ತು ಪ್ರೌಢಶಾಲೆಯ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಸಂಚಾಲಕ ಶಶಿ ಅಚ್ಚಪ್ಪ ಮಾತನಾಡಿ ಇಂದು ಜಾಗತಿಕವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿರುವ ಈ ದಿನವನ್ನು ಪರಿಸರವನ್ನು ಸಂರಕ್ಷಿಸುವುದರೊAದಿಗೆ ಪರಿಸರ ದಿನಾಚರಣೆ ಆಚರಿಸಕೊಳ್ಳಬೇಕಾಗಿದೆ, ಪರಿಸರ ಜಾಗೃತಿ ಕಾರ್ಯಗಳನ್ನು ಮಾಡಿ ಜನರಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು. ಜೂನಿಯರ್ ಕಾಲೇಜಿನ ಉಪನ್ಯಾಸಕ ಆರ್, ವಿನೋದ್ ಕುಮಾರ್ ಮಾತನಾಡಿ ಪರಿಸರ ದಿನ ನಾವು ಸಾಂಕೇತಿಕವಾಗಿ ಗಿಡಗಳನ್ನು ನೆಡಬಹುದು, ಆದರೆ ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ಲಾಭವನ್ನು ಬಯಸಬಾರದು. ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯವರು ಇಂದು ನಡೆಸುತ್ತಿರುವ ಪರಿಸರ ದಿನಾಚರಣೆಯ ಕಾರ್ಯಕ್ರಮದಲ್ಲಿ ನಾವೆಲ್ಲ ಭಾಗಿಯಾಗಿ ಗಿಡ ನೆಡುವ ಕಾರ್ಯಕ್ಕೆ ಕೈಜೋಡಿಸುವ ಎಂದು ಹೇಳಿದರು, ಕೊಡಗು ಪರಿಸರ ರಕ್ಷಣಾ ಹೋರಾಟ ಸಮಿತಿಯ ಕಾರ್ಯದರ್ಶಿ ಬಿ.ಡಿ. ಸುನಿತಾ, ಸದಸ್ಯರುಗಳಾದ ತೆರೇಸಾ ವಿಕ್ಟರ್, ಚೇತನ, ಗಾನವಿ, ಮತ್ತು ಜೂನಿಯರ್ ಕಾಲೇಜಿನ ಉಪನ್ಯಾಸಕರಾದ ರೀಟಾ ಐರಿಸ್ ಆಲ್ವರಿಸ್, ರೇಮಂಡ್, ಸುಜಾತ, ಪವಿತ್ರ ರೈ, ದಮಯಂತಿ, ತಿಮ್ಮಯ್ಯ, ಹೆಲನ್, ಕಾಂತಿ, ನಿಧಿ, ರೋಹಿಣಿ, ಪ್ರಿಯಾ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ, ಶಿಕ್ಷಕರುಗಳಾದ ತಮ್ಮಯ್ಯ, ಪ್ರತಿಕ, ಮದನ್, ರಂಜಿನಿ, ಸೇರಿದಂತೆ ವಿದ್ಯಾರ್ಥಿಗಳು ಮುಂತಾದವರು ಇದ್ದರು. ಐಗೂರು: ಯಡವನಾಡಿನ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಅರಣ್ಯ ಇಲಾಖೆಯಿಂದ ನೀಡಿದ ಹಣ್ಣಿನ ಗಿಡಗಳನ್ನು ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು ನೆಡುವ ಮೂಲಕ ಆಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ರಜನಿಕಾಂತ್, ಶಿಕ್ಷಕಿಯರಾದ ಪ್ರಿಯ, ಕಲಾವತಿ, ವಿದ್ಯಾ ಮತ್ತು ಶೀಲ ಭಾಗವಹಿಸಿದ್ದರು.ಕುಶಾಲನಗರ: ವಿವೇಕಾನಂದ ಪಿಯು ಕಾಲೇಜಿನಲ್ಲಿ ಅದ್ದೂರಿಯಾಗಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ವಿವೇಕಾನಂದ ಎಜುಕೇಶನ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷರಾದ ಎನ್.ಎನ್ ಶಂಭುಲಿAಗಪ್ಪ ಹಾಗೂ ಪ್ರಾಂಶುಪಾಲರಾದ ಕ್ಲಾರಾ ರೇಷ್ಮಾ ಅವರು ಮತ್ತು ಆಡಳಿತ ಅಧಿಕಾರಿ ಮಹೇಶ್ ಅಮೀನ್ ಅವರ ನೇತೃತ್ವದಲ್ಲಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಹಸಿರು ಬಣ್ಣದ ಉಡುಗೆಯನ್ನು ಧರಿಸಿ ವಿಶ್ವ ಪರಿಸರ ದಿನಾಚರಣೆ ಯನ್ನು ಆಚರಿಸಿದ್ದರು. ವಿಶ್ವ ಪರಿಸರ ದಿನಾಚರಣೆಯ ಮಹತ್ವದ, ಕುರಿತು ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೀರ್ತನ. ವಿ, ವಿಜ್ಞಾನ ವಿಭಾಗದ ವಿದ್ಯಾರ್ಥಿ ಧುನಿತಶ್ರೀ ವಿಷಯ ಮಂಡಿಸಿ ಸಾರಿದರು. ಕಾಲೇಜಿನ ಆವರಣದಲ್ಲಿ ವಿಶ್ವ ಪರಿಸರದ ದಿನಾಚರಣೆಯ ಅಂಗವಾಗಿ ಸಂಸ್ಥೆಯ ಅಧ್ಯಕ್ಷರಾದ ಶಂಭುಲಿAಗಪ್ಪ, ಪ್ರಾಂಶುಪಾಲರಾದ ಕ್ಲಾರ ರೇಷ್ಮಾ ಅವರ ನೇತೃತ್ವದಲ್ಲಿ ಗಿಡ ನೆಡಲಾಯಿತು. ಪೊನ್ನಂಪೇಟೆ : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಪಿ.ಯು. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪ್ರಸುತ್ತ ವರ್ಷದ ಧ್ಯೇಯ ವಾಕ್ಯದಂತೆ "ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು" ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಾಯಿತು. ಈ ಕಾರ್ಯಕ್ರಮಕ್ಕೆ ಗಿಡಕ್ಕೆ ನೀರರೆಯುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭ ಸಿ.ಐ.ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಡಾ. ರೋಹಿಣಿ ತಿಮ್ಮಯ್ಯ ಮಾತನಾಡಿ ಕೇವಲ ಒಂದು ದಿನಕ್ಕೆ ಸಸಿ ನೆಡುವುದಕ್ಕೆ ಮಾತ್ರ ಈ ಪರಿಸರ ದಿನಾಚರಣೆ ಸೀಮಿತವಾಗಬಾರದು. ಪ್ರಕೃತಿಯನ್ನು ಉಳಿಸಿ, ಬೆಳೆಸುವ ಜವಾಬ್ದಾರಿಯನ್ನು ಪ್ರತಿಯೊಬ್ಬ ಪ್ರಜೆಯು ತನ್ನ ಆದ್ಯ ಕರ್ತವ್ಯವೆಂದು ನಿಭಾಯಿಸಬೇಕು. ಸ್ವಚ್ಛ ಗಾಳಿ, ನೀರು, ಮಣ್ಣು ಇವುಗಳನ್ನು ಮಾಲಿನ್ಯ ಮಾಡದೆ ಪರಿಶುದ್ಧವಾಗಿ ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರದು ಎಂದರು.

ದ್ವಿತೀಯ ಪಿ.ಯು.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭಾಷಿತ ಕೆ.ಡಿ.ಪರಿಸರ ಜಾಗೃತಿ ಗೀತೆ ಹಾಡಿದರು. ದ್ವಿತೀಯ ಪಿ.ಯು ವಿದ್ಯಾರ್ಥಿ ಈಶಾನ್ ಬೋಪಣ್ಣ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸಿದರು. ದ್ವಿತೀಯ ಪಿ.ಯು. ವಿದ್ಯಾರ್ಥಿನಿ ಮೀಷಾ ಮುತ್ತಮ್ಮ ಮತ್ತು ತಂಡದವರು ಪರಿಸರ ನಾಶದಿಂದ ಎದುರಾಗುವ ಸಮಸ್ಯೆಗಳು ಮತ್ತು ಪರಿಸರ ಸಂರಕ್ಷಣೆಯ ಅಗತ್ಯತೆ, ಅನಿವಾರ್ಯತೆ ಕುರಿತು ಮೂಕಾಭಿನಯದ ಮೂಲಕ ಜಾಗೃತಿ ಮೂಡಿಸಿದರು. ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಕುರಿತು ಮಾನವ ಸರಪಳಿಯನ್ನು ನಿರ್ಮಿಸಿದರು. ರೇಷ್ಮಾ ಎಂ.ಆರ್ ಕಾರ್ಯಕ್ರಮ ನಿರ್ವಹಿಸಿದರು. ಕಾವ್ಯಶ್ರೀ ಕೆ.ಎ ಈ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು. ಈ ಸಂದರ್ಭ ಸಿ.ಐ.ಪಿ.ಯು. ವಿದ್ಯಾರ್ಥಿವೃಂದ ಮತ್ತು ಉಪನ್ಯಾಸಕರ ವೃಂದದವರು ಪಾಲ್ಗೊಂಡಿದ್ದರು.

ಶನಿವಾರಸAತೆ: ಇಲ್ಲಿನ ಕಾವೇರಿ ವಿದ್ಯಾಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ದಿನದ ಅಂಗವಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತ ಧ್ಯೇಯ ವಾಕ್ಯಗಳ ಫಲಕ ಹಿಡಿದು, ಘೋಷಣೆ ಕೂಗುತ್ತಾ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಜಾಗೃತಿ ಮೂಡಿಸಿದರು. ಆಟೋ ಚಾಲಕರು, ಪಂಚಾಯಿತಿ ಸದಸ್ಯರು, ಸಿಬ್ಬಂದಿಗಳಿಗೆ ವಿದ್ಯಾರ್ಥಿಗಳು ಗಿಡಗಳನ್ನು ವಿತರಿಸಿದರು. ಸಂಸ್ಥೆ ವತಿಯಿಂದ ಪರಿಸರ ಸ್ವಚ್ಛ ಗೊಳಿಸುವ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲ ಎಚ್.ಎನ್. ದೇವರಾಜ್, ಉಪನ್ಯಾಸಕರಾದ ಜಿ.ಎನ್. ಪದ್ಮಾವತಿ, ಎಚ್.ಎ.ಕಾಂತ, ಶಿಕ್ಷಕರಾದ ಎಸ್.ಕೆ. ಭಾಸ್ಕರ್, ಜಿ.ಎಸ್.ಜಾನಕಿ, ಎಸ್.ಎಸ್.ಬಿಂದು, ನಜ್ಮಾ, ಫಣಿರಾಜ್, ಆಟೋಚಾಲಕರ ಸಂಘದ ಪದಾಧಿಕಾರಿಗಳು, ಪಂಚಾಯಿತಿ ಅಧ್ಯಕ್ಷೆ ಭವಾನಿ, ಸದಸ್ಯರಾದ ಭೋಜಪ್ಪ, ಭಾಗ್ಯ, ಪಿಡಿಓ ಆಯಿಷಾ ಹಾಜರಿದ್ದರು. ವೀರಾಜಪೇಟೆ : ಪಟ್ಟಣದ ಸೆಂಟ್ ಆ್ಯನ್ಸ್ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕ, ಯುವ ರೆಡ್ ಕ್ರಾಸ್ ಘಟಕ, ನೇಚರ್ ಕ್ಲಬ್ ಹಾಗೂ ಸಂತ ಅನ್ನಮ್ಮ ಪಿ.ಯು. ಕಾಲೇಜಿನ ಸಹಯೋಗದಲ್ಲಿ ಕಾಲೇಜಿನ ಆಟದ ಮೈದಾನದ ಬಳಿಯಲ್ಲಿ ಗಿಡಗಳನ್ನು ನೆಡುವುದರ ಮೂಲಕ ಸಾಂಕೇತಿಕವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ಹಾಗೂ ಪಿ.ಯು. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಮದಲೈ ಮುತ್ತು ಅವರು ಗಿಡಗಳನ್ನು ನೆಟ್ಟು ಬೆಳೆಸಿದರೆ ನಾವು ಉಸಿರಾಡುವ ಗಾಳಿಯು ಉತ್ತಮವಾಗಿರುತ್ತದೆ. ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಪ್ಲಾಸ್ಟಿಕ್ ಮುಕ್ತ ಪರಿಸರವನ್ನು ನಿರ್ಮಿಸಲು ಎಲ್ಲರೂ ಪಣ ತೊಡಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರಿಸರದ ಸಂರಕ್ಷಣೆಯ ಹೊಣೆ ಎಲ್ಲರ ಮೇಲಿದ್ದು ಆರೋಗ್ಯವಂತ ಪರಿಸರವನ್ನು ನಿರ್ಮಿಸಲು ಎಲ್ಲರೂ ಗುರಿಯನ್ನು ಹೊಂದಬೇಕು ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ ಪರಿಸರ ದಿನಾಚರಣೆ ಎಂಬುವುದು ಆಚರಣೆಗೆ ಮಾತ್ರ ಸೀಮಿತವಾಗಿರದೆ ಸ್ವಚ್ಛ ಪರಿಸರದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ವಿಶೇಷವಾಗಿ ಯುವ ಜನತೆ ಸಾರ್ವಜನಿಕರಲ್ಲಿ ಪರಿಸರ ಜಾಗೃತಿಯನ್ನು ಮೂಡಿಸಬೇಕೆಂದು ಕರೆ ಕೊಟ್ಟರು. ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಬಿ.ಎನ್. ಶಾಂತಿಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜು ಮೈದಾನದ ಬಳಿ ಹಾಗೂ ಕಾಲೇಜು ಆವರಣದ ಸಮೀಪ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಪದವಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಬಿ.ಡಿ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ದೈಹಿಕ ಶಿಕ್ಷಣ ನಿರ್ದೇಶಕರಾದ ಬಿ.ವಿ. ರಾಜ ರೈ, ಉಪನ್ಯಾಸಕರು, ಕಾಲೇಜಿನ ಎನ್‌ಎಸ್‌ಎಸ್, ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಾ ವಿದ್ಯಾರ್ಥಿಗಳು, ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗುಣಮಟ್ಟವನ್ನು ಸುಧಾರಿಸಿ, ನೀರು ಹಾಗೂ ಮಣ್ಣನ್ನು ಸಂರಕ್ಷಿಸುವಲ್ಲಿ ಸಹಾಯ ಮಾಡುತ್ತವೆ. ಎಲ್ಲರನ್ನು ತನ್ನ ಮಡಿಲಲ್ಲಿ ಇಟ್ಟು ಸಾಕಿ ಸಲಹುವ ಭೂಮಿ ತಾಯಿಯ ಒಡಲಿಗೆ ಪ್ಲಾಸ್ಟಿಕ್ ನಂತಹ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ಪ್ರಕೃತಿ ಯನ್ನು ರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಮಕ್ಕಳಿಗೆ ತಿಳಿಹೇಳಿದರು. ಕಾರ್ಯಕ್ರಮದ ಹಿನ್ನೆಲೆ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ ಪರಿಸರ ಸಂರಕ್ಷಣೆ ಬಗ್ಗೆ ಘೋಷಣೆ ಕೂಗುತ್ತಾ ಜಾಥಾ ಹೊರಟರು .ಎಲ್. ಕೆ .ಜಿ., ಯು.ಕೆ.ಜಿ. ಮಕ್ಕಳು ಪರಿಸರಕ್ಕೆ ಹೊಂದುವAತಹ ಹಸಿರು ಉಡುಪು ಧರಿಸಿ ಸಂಭ್ರಮಿಸಿದರು. ಶನಿವಾರಸಂತೆ: ಇಲ್ಲಿನ ಬಾಪೂಜಿ ವಿದ್ಯಾಸಂಸ್ಥೆಯ ಆಡಳಿ ಮಂಡಳಿ, ಶಿಕ್ಷಕರು, ವಿದ್ಯಾರ್ಥಿಗಳು ವಿಶ್ವ ಪರಿಸರ ದಿನದ ಅಂಗವಾಗಿ ಶನಿವಾರಸಂತೆ ಪೊಲೀಸ್ ಠಾಣೆ, ಸಮುದಾಯ ಆರೋಗ್ಯ ಕೇಂದ್ರ, ನಾಡಕಚೇರಿ, ವಿದ್ಯುತ್ ಇಲಾಖೆ ಹಾಗೂ ದುಂಡಳ್ಳಿ ಗ್ರಾ.ಪಂ.ಗಳಿಗೆ ಮೆರವಣಿಗೆಯಲ್ಲಿ ಸಾಗಿ ಗಿಡಗಳನ್ನು ವಿತರಿಸಿ, ಪರಿಸರ ಜಾಗೃತಿ ಮೂಡಿಸಿದರು. ಶಾಲಾ ಆವರಣವನ್ನು ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಸಂಭ್ರಮಿಸಿದರು. ಸಂಸ್ಥೆಯ ಅಧ್ಯಕ್ಷ ಲಿಂಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸ್ನೇಹಿಗಳಾಗಿ ಶಾಲಾ ಆವರಣದಲ್ಲಿ ನೆಟ್ಟ ಗಿಡಗಳನ್ನು ರಕ್ಷಿಸಬೇಕು. ಉತ್ತಮ ಪರಿಸರದಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು. ಮುಖ್ಯ ಶಿಕ್ಷಕ ಉಲ್ಲಾಸ್ ಮಾತನಾಡಿ, ಪ್ರತಿಯೊಬ್ಬರು ಗಿಡ ನೆಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮನೆಗೊಂದು ಗಿಡ ನೆಡುವ ಮೂಲಕ ಪರಿಸರ ಉಳಿಸಬಹುದು ಎಂದರು. ಸಂಸ್ಥೆಯ ಕಾರ್ಯದರ್ಶಿ ಮನೋಹರ್, ಶಿಕ್ಷಕರು ಉಪಸ್ಥಿತರಿದ್ದರು.