ಮಡಿಕೇರಿ, ಜೂ. ೯: ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ವಿವಿಧ ಯೋಜನೆಗಳಲ್ಲಿ ಸೇವಾ ಸಿಂಧು ತಂತ್ರಾAಶದ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಸ್ವಾವಲಂಬಿ ಸಾರಥಿ ಯೋಜನೆ: ಹಿಂದುಳಿದ ವರ್ಗಗಳ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ ಮಂಜೂರು ಮಾಡುವ ಘಟಕ ವೆಚ್ಚದ ಶೇ.೫೦ ರಷ್ಟು, ಗರಿಷ್ಟ ರೂ.೩ ಲಕ್ಷಗಳ ಸಹಾಯಧನವನ್ನು(ಸಬ್ಸಿಡಿ) ನಿಗಮದಿಂದ ಬಿಡುಗಡೆ ಮಾಡಲಾಗುವುದು. ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ.೧.೨೦ ಲಕ್ಷಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು ೨೧ ರಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.
ಸ್ವಯA ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ): ಹಿಂದುಳಿದ ವರ್ಗಗಳಿಗೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು / ಉದ್ಯಮಗಳಿಗೆ ರಾಷ್ಟಿçÃಕೃತ ಬ್ಯಾಂಕ್/ವಾಣಿಜ್ಯ/ಗ್ರಾಮೀಣ ಬ್ಯಾಂಕ್‌ಗಳು/ ಷೆಡ್ಯೂಲ್ ಬ್ಯಾಂಕ್ ಗಳ/ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.೨೦ರಷ್ಟು ಗರಿಷ್ಠ ರೂ.೧ ಲಕ್ಷಗಳ ಸಹಾಯಧನವನ್ನು(ಸಬ್ಸಿಡಿ) ನಿಗಮದಿಂದ ಬಿಡುಗಡೆ ಮಾಡಲಾಗುವುದು. ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರಗಳು, ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಲಕ್ಷ ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು.
ಸ್ವಾತಂತ್ರö್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ: ಹಿಂದುಳಿದ ವರ್ಗಗಳ ವಿದ್ಯಾವಂತ ಯುವಜನರನ್ನು ಗುರುತಿಸಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆ.ಜಿ.ಟಿ.ಟಿ.ಐ., ಎ.ಟಿ.ಡಿ.ಸಿ, ವಿಟಿಯು ಮತ್ತು ಕಾಳಿದಾಸ ಶಿಕ್ಷಣ ಸಂಸ್ಥೆ ಗದಗಗಳ ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಟ ಕೌಶಲ್ಯ ತರಬೇತಿಯನ್ನು ನೀಡಿ ಅವರ ಉದ್ಯೋಗ ಸಾಮರ್ಥ್ಯವನ್ನು ಹಾಗೂ ಸಾಮಾಜಿಕ/ಆರ್ಥಿಕ ಸ್ಥಿತಿಗತಿಗಳನ್ನು ಉನ್ನತೀಕರಿಸುವ ನಿಟ್ಟಿನಲ್ಲಿ ಉದ್ಯೋಗಿ ಮುಖಿಗಳನ್ನಾಗಿಸುವ ತರಬೇತಿ ನೀಡಲಾಗುತ್ತದೆ.
೧೦ನೇ ತರಗತಿ, ದ್ವಿತೀಯ ಪಿ.ಯು.ಸಿ., ಡಿಪ್ಲೋಮ, ಪದವಿ, ಎಂಜಿನಿಯರಿAಗ್ ವ್ಯಾಸಂಗ ಪೂರ್ಣಗೊಳಿಸಿರಬೇಕು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೨೫ ವರ್ಷಗಳ ಒಳಗಿರಬೇಕು. ಪ್ರವರ್ಗ-೧ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಕುಟುಂಬದ ವಾರ್ಷಿಕ ವರಮಾನ/ಆದಾಯ ಮಿತಿ ಇರುವುದಿಲ್ಲ. ಪ್ರವರ್ಗ-೨ಎ,೩ಎ ಮತ್ತು ೩ಬಿಗೆ ಸೇರಿದ ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ/ಆದಾಯ ರೂ.೮ ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರು hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom/ ಜಾಲತಾಣದಲ್ಲಿ ಅರ್ಜಿ ಸಲ್ಲಿಸಬಹುದು.
ಹೊಲಿಗೆ ಯಂತ್ರ ವಿತರಣೆ ಯೋಜನೆ: ಹಿಂದುಳಿದ ವರ್ಗಗಳ ಬಡ ಕುಟುಂಬದವರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.೯೮ ಸಾವಿರಗಳು ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಲಕ್ಷ ಒಳಗಿರಬೇಕು. ಅರ್ಜಿದಾರರ ವಯಸ್ಸು ೧೮ ರಿಂದ ೫೫ ವರ್ಷಗಳ ಮಿತಿಯಲ್ಲಿರಬೇಕು.
ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಮತ್ತು ೩ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.
ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ hಣಣಠಿ://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ನಿಗಮದ ವೆಬ್‌ಸೈಟ್ ತಿತಿತಿ.ಜbಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪ ಅಥವಾ ೮೦೫೦೭೭೦೦೦೫ ಸಂಪರ್ಕಿಸಬಹುದು. ಅರ್ಜಿಯನ್ನು ಅಗತ್ಯ ದಾಖಲಾತಿ ಗಳೊಂದಿಗೆ ತಾ. ೩೦ ರೊಳಗೆ ಸೇವಾಸಿಂಧು ತಂತ್ರಾAಶದ ಮುಖಾಂತರ ಸಲ್ಲಿಸುವುದು. ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಮಹಾದೇವಿ ತಿಳಿಸಿದ್ದಾರೆ