ಮಡಿಕೇರಿ, ಜೂ. ೧೦: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮ್ಮದ್ ಜಿಲ್ಲೆಗೆ ಭೇಟಿ ನೀಡಿ ಅಲ್ಪಸಂಖ್ಯಾತ ಸಮುದಾಯಗಳ ಪ್ರಮುಖರೊಂದಿಗೆ ಸಭೆ ನಡೆಸಿದರು.

ಮೊದಲು ಅಲ್ಪಸಂಖ್ಯಾತರ ಇಲಾಖೆಯ ಸಂಸ್ಥೆಗಳು, ಅಂಗನವಾಡಿ ಸೇರಿದಂತೆ ವಿವಿಧೆಡೆಗೆ ಭೇಟಿ ನೀಡಿದ ಬಳಿಕ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿ ಅಲ್ಪಸಂಖ್ಯಾತರು ಅನುಭವಿಸುತ್ತಿರುವ ಸಮಸ್ಯೆಯನ್ನು ಆಲಿಸಿ ಪರಿಹಾರದ ಭರವಸೆಯನ್ನು ನೀಡಿದರು.

ಈ ಸಂದರ್ಭ ವಕ್ಫ್ ಮಂಡಳಿಗೆ ದೊರೆಯುತ್ತಿರುವ ಅನುದಾನ ಕಡಿಮೆಯಿದ್ದು, ಇದನ್ನು ಹೆಚ್ಚಿಸುವಂತೆ ಮನವಿ ಮಾಡಿದರು. ಸಭೆಯಲ್ಲಿ ಆಯೋಗದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಜಫಾರಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ವಕ್ಫ್ ಮಂಡಳಿ ಅಧಿಕಾರಿ ಇರ್ಫಾನ್, ೧೫ ಅಂಶಗಳ ಕಾರ್ಯಕ್ರಮ ಸದಸ್ಯರಾದ ಹನೀಫ್, ಸೂಫಿಯಾನ್, ಖಾಲಿದ್ ಹಾಜಿ ಸೇರಿದಂತೆ ಇನ್ನಿತರರು ಹಾಜರಿದ್ದರು.