ಮಡಿಕೇರಿ, ಜೂ. ೧೦: ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ತಾ. ೧೧ ರಂದು (ಇಂದು) ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ತಾ. ೧೧ ರಂದು ಬೆಳಿಗ್ಗೆ ೧೦.೪೫ ಗಂಟೆಗೆ ಕುಶಾಲನಗರದ ಇಂದಿರಾ ಕ್ಯಾಂಟೀನ್ ಭೇಟಿ ಹಾಗೂ ಪರಿಶೀಲನೆ ಮಾಡಲಿದ್ದಾರೆ. ನಂತರ ಬೆಳಿಗ್ಗೆ ೧೧ ಗಂಟೆಗೆ ನಗರಾಭಿವೃದ್ಧಿ ಮತ್ತು ಪೌರಾಡಳಿತ ಇಲಾಖೆ ವತಿಯಿಂದ ಕುಶಾಲನಗರದಲ್ಲಿ ‘ನೂತನ ಪುರಸಭಾ ಕಚೇರಿ ಕಟ್ಟಡ’ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬಳಿಕ ಮಧ್ಯಾಹ್ನ ೧೨.೪೫ ಗಂಟೆಗೆ ಕೊಡಗು ಜಿಲ್ಲೆಯ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮಧ್ಯಾಹ್ನ ೧ ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಪೌರಾಡಳಿತ ಮತ್ತು ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.

ನಂತರ ಮಧ್ಯಾಹ್ನ ೩ ಗಂಟೆಗೆ ಪೌರಾಡಳಿತ ಮತ್ತು ಹಜ್ ಸಚಿವರ ಅಧ್ಯಕ್ಷತೆಯಲ್ಲಿ ಮೈಸೂರು ವಿಭಾಗದ ನಗರೋತ್ಥಾನ ೩ ಮತ್ತು ೪ ಹಾಗೂ ಇತರೆ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ. ಕೆ. ಮುರಳಿಧರ ತಿಳಿಸಿದ್ದಾರೆ.