ಅಹ್ಮದಾಬಾದ್, ಜೂ. ೧೩: ಅಹ್ಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಕನಿಷ್ಟ ೨೬೫ ಮಂದಿ ಸಾವನ್ನಪಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸಾವಿನ ಸಂಖ್ಯೆಯನ್ನು ಕೇಂದ್ರ ಸರಕಾರ ಇದುವರೆಗೂ ಅಧಿಕೃತವಾಗಿ ಘೋಷಿಸಿಲ್ಲ. ೪ಐದನೇ ಪುಟಕ್ಕೆ (ಮೊದಲ ಪುಟದಿಂದ) ವಿಶ್ವದಲ್ಲಿ ಸಂಭವಿಸಿದ ಅತಿದೊಡ್ಡ ವಿಮಾನ ದುರಂತಗಳ ಸಾಲಿಗೆ ಅಹ್ಮದಾಬಾದ್ ವಿಮಾನ ಅಪಘಾತ ಸೇರ್ಪಡೆಯಾಗಿದ್ದು, ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ ೨೪೧ ಮಂದಿ ಸನಿಹದ ವೈದ್ಯಕೀಯ ವಸತಿ ನಿಲಯ ಸ್ಥಳೀಯ ನಿವಾಸಿಗಳು ಸೇರಿದಂತೆ ೨೩ ವೈದ್ಯಕೀಯ ಕನಿಷ್ಟ ೨೬೫ ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ ಅವಶೇಷಗಳಡಿಯಿಂದ ೨೦೪ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಸುಮಾರು ೪೧ ಮಂದಿ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಆಯುಕ್ತ ಜಿ.ಎಸ್.ಮಲಿಕ್ ಹೇಳಿದ್ದಾರೆ.

ಬ್ಲಾö್ಯಕ್ ಬಾಕ್ಸ್ ಪತ್ತೆ

ಪತನಗೊಂಡ ವಿಮಾನದ ಒಂದು ಬ್ಲಾö್ಯಕ್ ಬಾಕ್ಸ್ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬ್ಲಾö್ಯಕ್‌ಬಾಕ್ಸ್ನಲ್ಲಿನ ದತ್ತಾಂಶಗಳ ಸಹಾಯದಿಂದ ವಿಮಾನ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ಸಾಧ್ಯವಾಗಲಿದೆ.

ಮೂಲಗಳ ಪ್ರಕಾರ, ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ)ದ ತಂಡ ಅಹ್ಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರರಾಷ್ಟಿçÃಯ ವಿಮಾನ ನಿಲ್ದಾಣ ಬಳಿಯ ಜನದಟ್ಟಣೆಯ ಮೇಘನಿ ನಗರ ಪ್ರದೇಶದಲ್ಲಿ ಒಂದು ಬ್ಲಾö್ಯಕ್ ಬಾಕ್ಸ್ ವಶಪಡಿಸಿಕೊಂಡಿದೆ.

ವಿಮಾನ ಅಪಘಾತದ ಬಳಿಕ ಇಂಧನ ಟ್ಯಾಂಕ್ ಸ್ಫೋಟಗೊಂಡಿತ್ತು. ಬೆಂಕಿ ಉಂಡೆಗಳು ಇಡೀ ಪ್ರದೇಶವನ್ನು ಆವರಿಸಿದ್ದವು. ಹೀಗಾಗಿ, ಅಪಘಾತದ ಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ೧೦೦೦ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. ಇದು ರಕ್ಷಣಾ ಕಾರ್ಯಾಚರಣೆ ನಡೆಸಲು ಅವಕಾಶವೇ ನೀಡಲಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಆ ಸ್ಥಳದಿಂದ ನಾಯಿ ಮತ್ತು ಪಕ್ಷಿಗಳು ಸಹ ತಪ್ಪಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಅವರು ಅಪಘಾತದ ಭೀಕರತೆಯನ್ನು ವಿವರಿಸಿದ್ದಾರೆ.

೬ ಮಂದಿ ಗುರುತು ಪತ್ತೆ

ದುರಂತದ ನಂತರ ಕನಿಷ್ಟ ೨೬೫ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಅಹ್ಮದಾಬಾದ್ ಸಿವಿಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಪೈಕಿ ಆರು ಜನರ ಮುಖಗಳು ಹಾಗೆಯೇ ಇದ್ದುದರಿಂದ ಅವರನ್ನು ಮಾತ್ರ ಗುರುತಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಚಿರಾಗ್ ಗೋಸಾಯಿ ಅವರು ತಿಳಿಸಿದ್ದಾರೆ.

ಪ್ರಯಾಣಿಕರು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿರುವುದರಿಂದ ಇತರರ ಗುರುತುಗಳನ್ನು ಖಚಿತಪಡಿಸಿಕೊಳ್ಳಲು ಡಿಎನ್‌ಎ ಪ್ರೊಫೈಲಿಂಗ್ ನಡೆಯುತ್ತಿದೆ ಎಂದು ಅವರು ಹೇಳಿದರು

ಪ್ರಧಾನಿ ಭೇಟಿ

ಏರ್ ಇಂಡಿಯಾ ವಿಮಾನ ಅಪಘಾತದ ಸ್ಥಳಕ್ಕೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಇಲ್ಲಿನ ನಾಗರಿಕ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ ಮಾಡಿದ ಮೋದಿ, ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿ, ನಡೆದ ವಿಮಾನ ದುರಂತದಿAದ ನಾವೆಲ್ಲರೂ ತೀವ್ರ ಆಘಾತಗೊಂಡಿದ್ದೇವೆ. ಇಷ್ಟೊಂದು ಹಠಾತ್ ಮತ್ತು ಹೃದಯವಿದ್ರಾವಕ ರೀತಿಯಲ್ಲಿ ಹಲವಾರು ಜೀವಗಳನ್ನು ಕಳೆದುಕೊಂಡಿರುವುದು ಪದಗಳಿಗೆ ನಿಲುಕದಷ್ಟು ದೊಡ್ಡ ದುರಂತ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ. ತಮ್ಮವರನ್ನು ಕಳೆದುಕೊಂಡವರ ನೋವು ನಮಗೆ ಅರ್ಥವಾಗುತ್ತದೆ. ವರ್ಷಗಳವರೆಗೆ ಈ ಆಘಾತ ನಮ್ಮನ್ನು ಕಾಡಲಿದೆ ಎಂದಿದ್ದಾರೆ. ನಿನ್ನೆ ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಮೇಘನಿನಗರ ಪ್ರದೇಶದ ಬಿಜೆ ವೈದ್ಯಕೀಯ ಕಾಲೇಜಿನ ಸಂಕೀರ್ಣಕ್ಕೆ ಬೋಯಿಂಗ್ ೭೮೭ ಡ್ರೀಮ್‌ಲೈನರ್ ವಿಮಾನ ಅಪ್ಪಳಿಸಿದ ಸ್ಥಳವನ್ನು ಇಂದು ಪ್ರಧಾನಿ ಸುಮಾರು ೨೦ ನಿಮಿಷಗಳ ಕಾಲ ಪರಿಶೀಲಿಸಿದರು.