ಚೆಯ್ಯಂಡಾಣೆ, ಜೂ. ೧೪: ನಾಪೋಕ್ಲು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಂ.ಪಿ. ಜ್ಯೋತಿ ಅವರನ್ನು ಬಲ್ಲಮಾವಟಿ ಅಂಗನವಾಡಿ ವೃತ್ತದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು.
೩೬ ವರ್ಷ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಜ್ಯೋತಿ ಅವರಿಗೆ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಈ ಸಂದರ್ಭ ಉತ್ತಮ ಅಂಗನವಾಡಿ ಕಾರ್ಯಕರ್ತೆ ರಾಜ್ಯ ಪ್ರಶಸ್ತಿ ಪಡೆದ ಹಳೇ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಅವರನ್ನು ಕೂಡ ಸನ್ಮಾನಿಸಲಾಯಿತು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶೀಲಾ ಅಶೋಕ್, ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ಅಂಗನವಾಡಿ ಕಾರ್ಯ ಕರ್ತೆಯರು, ಸಹಾಯಕಿಯರು ಹಾಗೂ ಮಕ್ಕಳು ಭಾಗವಹಿಸಿದ್ದರು.
ಅಂಗನವಾಡಿ ಕಾರ್ಯಕರ್ತೆ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರೆ, ಭಾಗ್ಯವತಿ ವಂದಿಸಿದರು.