ಸೋಮವಾರಪೇಟೆ, ಜೂ. ೧೪: ಸಮೀಪದ ಮಾದಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಎಲ್.ಕೆ.ಜಿ., ಯು.ಕೆ.ಜಿ. ತರಗತಿಗಳಿಗೆ ಚಾಲನೆ ನೀಡ ಲಾಯಿತು. ನೂತನ ತರಗತಿಗಳನ್ನು ಮಾದಾಪುರ ವಿ.ಎಸ್.ಎಸ್.ಎನ್. ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಆಂಗ್ಲ ಮಾಧ್ಯಮ ಶಿಕ್ಷಣವು ಮಕ್ಕಳ ಮುಂದಿನ ವಿದ್ಯಾಭ್ಯಾಸ ಹಾಗೂ ಭವಿಷ್ಯಕ್ಕೆ ಪೂರಕವಾಗಿದೆ. ಬಡವರು, ಕಾರ್ಮಿಕರು ಸೇರಿದಂತೆ ಎಲ್ಲಾ ವರ್ಗದ ಮಕ್ಕಳಿಗೆ ಈ ಯೋಜನೆ ವರದಾನವಾಗಿದ್ದು, ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯ ಕೆ.ಎ. ಲತೀಫ್, ಪಿ.ಡಿ. ಅಂತೋಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ನಸೀಮಾ, ಮುಖ್ಯೋಪಾ ಧ್ಯಾಯ ಮಂಜಯ್ಯ, ಶಿಕ್ಷಕರು, ಪೋಷಕರಿದ್ದರು. ಶಾಲಾ ವಿದ್ಯಾರ್ಥಿ ಗಳಿಗೆ ನೋಟ್ ಪುಸ್ತಕ ಹಾಗೂ ಬ್ಯಾಗ್‌ಗಳನ್ನು ಉಚಿತವಾಗಿ ವಿತರಿಸು ತ್ತಿರುವ ಪಿ.ಡಿ. ಅಂತೋಣಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು.