ಕೂಡಿಗೆ, ಜೂ. ೧೪: ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು.

ಮುಂಜಾಗ್ರತಾ ಕ್ರಮವಾಗಿ ಶಾಲಾ ಆವರಣದಲ್ಲಿ ಲಾರ್ವಾ ಸಮೀಕ್ಷೆ ಮತ್ತು ಹಿರಿಯ ಆರೋಗ್ಯ ನಿರೀಕ್ಷಕರಾದ ವಿಶ್ವಜ್ಞಾ ಡೆಂಗ್ಯೂ ಹಾಗೂ ಕೋವಿಡ್ - ೧೯ ಕಾಯಿಲೆ ಬಗ್ಗೆ, ಈಡಿಸ್ ಲಾರ್ವಾ ಮುಕ್ತ ಶಾಲಾ ಆವರಣವನ್ನಾಗಿ ಮಾಡಲು ಮಾಹಿತಿಯನ್ನು ನೀಡಿದರು.

ಈ ಸಂದರ್ಭ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಸೌರಭ್, ಬಿಂದು ಸೇರಿದಂತೆ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು.