ಚೆಯ್ಯಂಡಾಣೆ, ಜೂ. ೧೯: ಚೆಯ್ಯಂಡಾಣೆ ಸಮೀಪದ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣ ಚೇಲಾವರ ಜಲಪಾತದಲ್ಲಿ ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ. ಅನಧಿಕೃತವಾಗಿ ಪ್ರವೇಶ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ನರಿಯಂದಡ ಗ್ರಾಮ ಪಂಚಾಯಿತಿ ಪ್ರಕಟಣೆಯಲ್ಲಿ ತಿಳಿಸಿದೆ.