ಸೋಮವಾರಪೇಟೆ, ಜೂ. ೧೯: ಇಲ್ಲಿನ ತಾಲೂಕು ಕಚೇರಿಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬAಧ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಸಭೆ ನಡೆಸಿ, ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಸಲಹೆ-ಸೂಚನೆ ನೀಡಿದರು.
ಈ ಬಾರಿ ಮುಂಗಾರು ಬೇಗನೇ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು. ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿರದ ಶಾಲಾ ಕಾಲೇಜು, ಅಂಗನವಾಡಿ ಕಟ್ಟಡ ಸಂಬAಧ ಅಂದಾಜುಪಟ್ಟಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದAತೆ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತಿವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಹಶೀಲ್ದಾರರು ಮತ್ತು ತಾ.ಪಂ. ಇ.ಒ.ಗಳ ಜೊತೆ ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುವAತೆ ನಿರ್ದೇಶನ ನೀಡಿದರು.
ಇದಕ್ಕೂ ಮುನ್ನ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬAಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬAಧಿಸಿದAತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.
ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬAಧಿಸಿದAತೆ ಇದೇ ಸಂದರ್ಭ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಪರಮೇಶ ಕುಮಾರ್ ಸೇರಿದಂತೆ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.