*ಗೋಣಿಕೊಪ್ಪ, ಜೂ. ೧೯: ಹರಿಶ್ಚಂದ್ರಪುರ ಮುಖ್ಯ ರಸ್ತೆ ಬದಿಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪುರುಷನ ಮೃತದೇಹ ಪತ್ತೆಯಾಗಿದೆ. ೫೫ ವರ್ಷ ಪ್ರಾಯ ಎಂದು ಅಂದಾಜಿಸಲಾಗಿದೆ.

ಬೆಳಿಗ್ಗೆ ೬ ಗಂಟೆಗೆ ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಲಗಿದ ಸ್ಥಿತಿಯಲ್ಲಿದ್ದ ಶವವನ್ನು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಅಪರಿಚಿತರ ಬಗ್ಗೆ ಮಾಹಿತಿ ಇರುವವರು ಗೋಣಿಕೊಪ್ಪ ಠಾಣೆಯನ್ನು ಸಂಪರ್ಕಿಸಬಹುದಾಗಿದೆ. ದೂ. ೦೮೨೭೪೨೪೭೩೩೩