ಮಡಿಕೇರಿ, ಜೂ. ೧೯: ಪ್ರಸಕ್ತ (೨೦೨೫-೨೬) ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಬೆಂಗಳೂರಿನ ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯ ವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ೩ ತಿಂಗಳ ಯುಪಿಎಸ್ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ ನೀಡುವ ಮೂಲಕ ರಾಜ್ಯದ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ತರಬೇತಿ ನೀಡಲಾಗುತ್ತಿದ್ದು, ಈ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್, ೨೧ ಕೊನೆಯ ದಿನವಾಗಿದೆ. ಕೋರ್ಸ್ ವಿವರ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿ, ತರಬೇತಿ ಅವಧಿ ೩ ತಿಂಗಳು, ೨೧ ರಿಂದ ೩೫ ವರ್ಷದೊಳಗಿರಬೇಕು. ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. ಅಭ್ಯರ್ಥಿಯು ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿಯನ್ನು ನಿರ್ದೇಶನಾಲಯದ ಜಾಲತಾಣ hಣಣಠಿs://ಜom.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಅಲ್ಪಸಂಖ್ಯಾತರ ನಿರ್ದೇಶನಾಲಯ, ನಂ.೧೬ಸಿ, ಮಿಲ್ರ‍್ಸ್ ಟ್ಯಾಂಕ್ ಬೆಡ್ ರಸ್ತೆ, ವಸಂತ ನಗರ, ಬೆಂಗಳೂರು ೫೬೦೦೫೨. ತರಬೇತಿಯು ಹಜ್ ಭವನ, ಬೆಂಗಳೂರು ಅಥವಾ ಶಿಷ್ಯವೇತನದೊಂದಿಗೆ ಬೆಂಗಳೂರು ಹೊರತು ಪಡಿಸಿ ಪ್ರತಿಷ್ಠಿತ ಸಂಸ್ಥೆಯ ಮೂಲಕ ನಡೆಯಲಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.