ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕೆ
ಮಡಿಕೇರಿ, ಜೂ. ೨೦: ಪ್ರಸಕ್ತ ಸಾಲಿನ ಅನುದಾನಿತ ಕೋರ್ಸ್ಗಳಾದ ಆರ್ಕಿಟೆಕ್ಚರ್ ಅಸಿಸ್ಟೆಂಟಿಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿAಗ್, ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ‍್ಡ್), ಅಪಾರೇಲ್ ಡಿಸೈನ್ ಮತ್ತು ಫ್ಯಾಬ್ರಿಕೇಷನ್ ಟೆಕ್ನಾಲಜಿ, ಎಲೆಕ್ಟಿçಕಲ್ ಎಂಜಿನಿಯರಿAಗ್ ಮತ್ತು ಎಲೆಕ್ಟಿçಕ್ ವೆಹಿಕಲ್ ಟೆಕ್ನಾಲಜಿ ಈ ಮೂರು ವರ್ಷಗಳ ಅವಧಿಯ ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಾರ್ಹತೆ: ಕರ್ನಾಟಕ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹಾಗೂ ಅಂಗವೈಕಲ್ಯತೆಯ ಲಕ್ಷಣ ಹೊಂದಿರಬೇಕು. ಮೂಳೆ ಮತ್ತು ಕೀಲು ಅಂಗವಿಕಲತೆ ಶೇ. ೪೦ ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಗವಿಕಲತೆ-೬೦ ಡಿಬಿ ಮತ್ತು ಮೇಲ್ಪಟ್ಟು, ಅಂಧತ್ವ -೬/೬೦ ಅಥವಾ ೨೦/೨೦೦ ಸ್ನೆಲೆನ್.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟçಮಟ್ಟದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶ ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರುಗಳಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
ಪ್ರವೇಶಕ್ಕೆ ಅರ್ಜಿಗಳನ್ನು ಜೆಎಸ್‌ಎಸ್ ಮಹಾವಿದ್ಯಾಪೀಠ ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಮೈಸೂರು ಇಲ್ಲಿಂದ (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. ೧೦೦ ಹಾಗೂ Sಅ/Sಖಿ/ಅ-೧ ವರ್ಗದವರಿಗೆ ರೂ. ೫೦) ನಗದು ಅಥವಾ ಡಿಡಿ ಮೂಲಕ ಮೈಸೂರಿನಲ್ಲಿ ಸಂದಾಯವಾಗುವAತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ತಿತಿತಿ.ರಿssಠಿಜಚಿ.oಡಿg, ಇ-ಮೇಲ್-ಮೊಬೈಲ್ ೯೮೪೪೬೪೪೯೩೭ ಮೂಲಕ ಸಂಪರ್ಕಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ತಾ. ೨೩ ರವರೆಗೆ ವಿಸ್ತರಿಸಲಾಗಿದೆ ಎಂದು ಮೈಸೂರು ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.
ಬಾಲ ಪುರಸ್ಕಾರ ಪ್ರಶಸ್ತಿಗೆ
ಮಡಿಕೇರಿ, ಜೂ. ೨೦: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಭಾರತ ಸರ್ಕಾರದ ವತಿಯಿಂದ ೨೦೨೫ನೇ ಸಾಲಿನ ರಾಷ್ಟಿçÃಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಕೊಡಗು ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ, ಸಂಸ್ಕೃತಿ, ನೂತನ ಅವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ ಮಕ್ಕಳು ರಾಷ್ಟಿçÃಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ೨೦೨೫ ರ ಜುಲೈ ೩೧ಕ್ಕೆ ಅನ್ವಯವಾಗುವಂತೆ ೫ ವರ್ಷ ಮೇಲ್ಪಟ್ಟ ಹಾಗೂ ೧೮ ವರ್ಷ ದೊಳಗಿರುವ ಸಾಧನೆ ಮಾಡಿರುವ ಎಲ್ಲಾ ಮಕ್ಕಳು ರಾಷ್ಟಿçÃಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ ೨೦೨೫ಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ೨೦೨೫ರ ಜುಲೈ ೩೧ ರೊಳಗೆ ಆನ್‌ಲೈನ್ hಣಣಠಿs://ಚಿತಿಚಿಡಿಜs.gov.iಟಿ ಮೂಲಕ ಸಲ್ಲಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.
ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ
ಮಡಿಕೇರಿ, ಜೂ. ೨೦: ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಇಲಾಖಾ ವತಿಯಿಂದ ನೀಡಲಾಗುವ ಪ್ರೋತ್ಸಾಹಧನ ಮಂಜೂರಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರೋತ್ಸಾಹಧನ ವಿವರ: ದ್ವಿತೀಯ ಪಿಯುಸಿ ರೂ. ೨೦ ಸಾವಿರ, ಪದವಿ ರೂ. ೨೫ ಸಾವಿರ, ಯಾವುದೇ ಪೋಸ್ಟ್ ಗ್ರಾö್ಯಜ್ಯುವೇಟ್ ಕೋರ್ಸ್ ಎಂ.ಎ, ಎಂ.ಎಸ್ಸಿ, ಇತ್ಯಾದಿ ರೂ. ೩೦ ಸಾವಿರ ಮತ್ತು ಕೃಷಿ, ಇಂಜಿನಿಯರಿAಗ್, ವೆಟರ್ನರಿ, ಮೆಡಿಸಿನ್ ರೂ. ೩೫ ಸಾವಿರ.
ಅರ್ಹತೆ: ವಿದ್ಯಾರ್ಥಿಗಳು ದ್ವಿತೀಯ, ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.
ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಇಂಜಿನಿಯರಿAಗ್, ಮೆಡಿಕಲ್ ಕೋರ್ಸುಗಳಿಗೆ ಸಂಬAಧಿಸಿದAತೆ ಪ್ರತಿ ವರ್ಷ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು. ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಈ ಕೋರ್ಸ್ಗಳಿಗೆ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‌ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸಾಗಿರಬೇಕು ಮತ್ತು ಅಂತಿಮ ವರ್ಷದ ತರಗತಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಗಿರಬೇಕು. ಎಲ್ಲಾ ಕೋರ್ಸುಗಳಲ್ಲಿ ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‌ಗಳಲ್ಲಿ ಕಂಪಾರ್ಟ್ಮೆAಟಲ್/ ಕ್ಯಾರಿ ಓವರ್ ಸಿಸ್ಟಮ್‌ರಡಿ ಪಾಸಾಗಿದ್ದರೆ ಅಂತಹವರು ಬಹುಮಾನ ಹಣ ಪಡೆಯಲು ಅರ್ಹರಿರುವುದಿಲ್ಲ.
ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.
ರಾಜ್ಯ, ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯಗಳಡಿ ಬರುವ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಸ್ವಾಯತ್ತ ವಿದ್ಯಾಸಂಸ್ಥೆಗಳಿಗೆ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಹರಿರುತ್ತಾರೆ. ಸರ್ಕಾರದಿಂದ ಮಾನ್ಯತೆ ಪಡೆಯದಿರುವ ವಿದ್ಯಾ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಅರ್ಹರಿರುವುದಿಲ್ಲ.
ವಿದ್ಯಾರ್ಥಿಯು ವ್ಯಾಸಂಗ ಮಾಡಿದ ಶೈಕ್ಷಣಿಕ ಸಂಸ್ಥೆ ಯಾವ ಜಿಲ್ಲೆಯಲ್ಲಿ ಇರುತ್ತದೆಯೋ ಅದೇ ಜಿಲ್ಲೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರಿಗೆ ಅರ್ಜಿ ಸಲ್ಲಿಸಬೇಕು. ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ನೇಟಿವ್ ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು.
ಆನ್‌ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: ದ್ವಿತೀಯ ಪಿಯುಸಿಗೆ ಅಭ್ಯರ್ಥಿಯ ಭಾವಚಿತ್ರ, ದ್ವಿತೀಯ ಪಿಯುಸಿ ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಇಂಜಿನಿಯರಿAಗ್, ಮೆಡಿಕಲ್ ಅಭ್ಯರ್ಥಿಯ ಭಾವಚಿತ್ರ, ಎಲ್ಲಾ ಸೆಮ್‌ಗಳ ಅಂಕಪಟ್ಟಿ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕ.
ವಿದ್ಯಾರ್ಥಿಗಳು ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್‌ಫ್ರೀ ದೂ. ೦೮೦-೨೨೬೩೪೩೦೦, ೦೮೦-೨೨೩೫೩೭೫೭ ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ಅವರ ದೂ. ೯೪೮೦೮೪೩೧೫೬ ಮತ್ತು ೦೮೨೭೬-೨೮೧೧೧೫ ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.