ಕುಶಾಲನಗರ, ಜೂ. ೨೦: ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ೨೦೨೫-೨೬ನೇ ಪ್ರಸ್ತುತ ಸಾಲಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿAಗ್ ಕೋರ್ಸ್ಗಳಿಗೆ ಸಿ.ಇ.ಟಿ.ಯ ಕೌನ್ಸಿಲಿಂಗ್ ಮೂಲಕ ಪ್ರವೇಶವಕಾಶ ಕಲ್ಪಿಸಲಾಗಿದೆ ಎಂದು ಕುಶಾಲನಗರ ಸರಕಾರಿ ಇಂಜಿನಿಯರಿAಗ್ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಐ. ಪರಶಿವಮೂರ್ತಿ ತಿಳಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸರ್ಕಾರಿ ಇಂಜಿನಿಯರಿAಗ್ ಕಾಲೇಜುಗಳ ಪೈಕಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕುಶಾಲನಗರ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ಪ್ರಸ್ತುತ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟಾçನಿಕ್ಸ್ ಅಂಡ್ ಕಮ್ಯೂನಿಕೇಶನ್ (ಇ ಆ್ಯಂಡ್ ಸಿ) ವಿಭಾಗ ಹಾಗೂ ಕಂಪ್ಯೂಟರ್ ಸೈನ್ಸ್ ವಿಭಾಗ ಸೇರಿದಂತೆ ಒಟ್ಟು ೪ ಕೋರ್ಸ್ಗಳಿಗೆ ತಲಾ ೬೦ ವಿದ್ಯಾರ್ಥಿಗಳಂತೆ ಪ್ರವೇಶಾತಿ ಕಲ್ಪಿಸಲಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ೮೦೫ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರೂ ಆದ ಸಹ ಪ್ರಾಧ್ಯಾಪಕ ಡಾ. ಎಸ್. ರಂಗನಾಥ್, ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಎನ್. ರಮೇಶ್, ಕಂಪ್ಯೂಟರ್ ವಿಭಾಗದ ಜಿ. ಶ್ರೀನಾಥ್, ಕಚೇರಿಯ ಅಧೀಕ್ಷಕರಾದ ಹೆಚ್.ಎ. ರೂಪಾ, ಎಂ. ಮಂಜು ಇದ್ದರು.