ಸಿದ್ದಾಪುರ, ಜೂ ೨೦: ಬಾಡಗ ಬಾಣಂಗಾಲ ಗ್ರಾಮದಲ್ಲಿ ಹುಲಿಯ ಹೆಜ್ಜೆ ಕಂಡುಬAದಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಕರಡಿಗೋಡು ಗ್ರಾಮದ ಮುಖ್ಯ ರಸ್ತೆಯಲ್ಲಿ ರಾತ್ರಿ ಸಮಯ ಹುಲಿ ಪ್ರತ್ಯಕ್ಷಗೊಂಡಿತ್ತು. ಇದೀಗ ಬಾಡಗ ಬಾಣಂಗಾಲ ಗ್ರಾಮದ ಕಾಫಿ ಬೆಳೆಗಾರ ಸಿ.ಟಿ. ಪೊನ್ನಪ್ಪ ಎಂಬವರ ಕಾಫಿ ತೋಟದಲ್ಲ್ಲಿ ಹುಲಿ ಹೆಜ್ಜೆ ಕಂಡು ಬಂದಿದೆ. ಕಳೆದ ಒಂದು ತಿಂಗಳ ಹಿಂದೆ ಪೊನ್ನಪ್ಪ ಅವರಿಗೆ ಸೇರಿದ ಕರುವಿನ ಮೇಲೆ ದಾಳಿ ನಡೆಸಿ ಸಾಯಿಸಿತ್ತು. ಇದಲ್ಲದೆ ಬಾಡಗ ಬಾಣಂಗಾಲ ವ್ಯಾಪ್ತಿಯ ಕಾಫಿ ತೋಟದೊಳಗೆ ಬೀಡು ಬಿಟ್ಟು ಜಾನುವಾರುಗಳ ಮೇಲೆ ಹುಲಿ ದಾಳಿ ನಡೆಸಿ ಗಬ್ಬದ ಹಸುವನ್ನು ಹಾಗೂ ಹಾಲು ಕರೆಯುವ ಹಸುವನ್ನು ಕೊಂದು ಹಾಕಿತ್ತು. ಇದೀಗ ಮತ್ತೆ ಹುಲಿ ಹೆಜ್ಜೆ ಪತ್ತೆಯಾಗಿದೆ.

ಈ ಹಿನ್ನೆಲೆಯಲ್ಲಿ ತಿತಿಮತಿ ವಲಯ ಅರಣ್ಯ ಅಧಿಕಾರಿ ಗಂಗಾಧರ್ ನೇತೃತ್ವದಲ್ಲಿ ಉಪವಲಯ ಅರಣ್ಯ ಅಧಿಕಾರಿ ಶಶಿ ಹಾಗೂ ಅವರ ಆನೆ ಕಾರ್ಯಪಡೆ ಮತ್ತು ಆರ್.ಆರ್.ಟಿ. ತಂಡದ ಸಿಬ್ಬಂದಿಗಳು ಕಾರ್ಯಾ ಚರಣೆ ನಡೆಸಿದರು. ಈ ಹಿಂದೆ ಬಾಡಗ ಬಾಣಂಗಾಲ ಗ್ರಾಮದಲ್ಲಿ ಹುಲಿಯ ಉಪಟಳ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಅದನ್ನು ಸೆರೆ ಹಿಡಿಯಲು ಕ್ಯಾಮರಾ ಅಳವಡಿಸಲಾಗಿತ್ತು. ಈ ಸಂದರ್ಭದಲ್ಲಿ ಹುಲಿಯ ಚಲನವಲನ ಕ್ಯಾಮರದಲ್ಲಿ ಸೆರೆಯಾಗಿತ್ತು. ನಂತರ ಹುಲಿಯನ್ನು ಸೆರೆ ಹಿಡಿಯಲು ಬೋನ್‌ಗಳನ್ನು ಕಾಫಿ ತೋಟದೊಳಗೆ ಇಡಲಾಗಿತ್ತು. ಆದರೆ ಹುಲಿಯು ಬೋನಿನತ್ತ ಸುಳಿಯಲಿಲ್ಲ. ಇದೀಗ ಮತ್ತೆ ಹುಲಿಯ ಚಲನವಲನ ಕಂಡು ಹಿಡಿಯಲು ಅರಣ್ಯ ಇಲಾಖೆಯ ಅಧಿಕಾರಿಗಳು ಶ್ರಮಿಸುತ್ತಿ ದ್ದಾರೆ. ಹುಲಿಯ ಸಂಚಾರದಿAದಾಗಿ ಕಾರ್ಮಿಕರು ಕಾಫಿ ತೋಟದೊಳಗೆ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ತಿತಿಮತಿ ಉಪವಲಯ ಅರಣ್ಯ ಅಧಿಕಾರಿ ಶಶಿ ಅವರು ಕಾರ್ಮಿಕರಿಗೆ ಎಚ್ಚರ ವಹಿಸುವಂತೆ ಹಾಗೂ ಹುಲಿಯ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಮಾಹಿತಿ ತಿಳಿಸುವಂತೆ ಮನವಿ ಮಾಡಿದ್ದಾರೆ.

- ವಾಸು