ಕುಶಾಲನಗರ, ಜೂ ೨೦: ಕುಶಾಲನಗರ ಪುರಸಭಾ ವ್ಯಾಪ್ತಿಯ ಬೈಚನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ರೂ ೨ ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಕುಶಾಲನಗರ ತಾಲೂಕು ಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಸದಾ ಸ್ಮರಿಸುವ ಕಾರ್ಯ ಆಗಬೇಕಿದೆ. ಅವರ ಧ್ಯೇಯ, ಉದ್ದೇಶ ಈಡೇರಿಕೆಗೆ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸುವಂತಾಗಬೇಕಿದೆ. ೫೦ ಸೆಂಟ್ ಜಾಗದಲ್ಲಿ ನಿರ್ಮಾಣ ವಾಗುವ ನೂತನ ಭವನ ಆಕರ್ಷಣೀಯವಾಗಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು.
ಅAಬೇಡ್ಕರ್ ಅವರ ಹೆಸರಿನಲ್ಲಿ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ವಿವಿಧ ಸಂಘ ಸಂಸ್ಥೆಗಳು ಒಂದಾಗಿ ಸೇರಿ ಸಂವಿಧಾನ ಶಿಲ್ಪಿ ಅವರ ಕನಸನ್ನು ನನಸಾಗಿಸುವ ಕೆಲಸ ಆಗಬೇಕು ಎಂದರು.
ಕುಶಾಲನಗರ ಗುಂಡುರಾವ್ ಬಡಾವಣೆಯ ಜಾತ್ರಾ ಮೈದಾನ ಸೇರಿದಂತೆ ಸರಕಾರಿ ಜಾಗಗಳಲ್ಲಿ ಕುಶಾಲನಗರ
(ಮೊದಲ ಪುಟದಿಂದ) ತಾಲೂಕಿಗೆ ಬೇಕಾಗಿರುವ ಅಗತ್ಯ ಕ್ರೀಡಾಂಗಣ ಸರಕಾರಿ ಆಸ್ಪತ್ರೆ, ಕಂದಾಯ ಭವನ, ತಾಲೂಕು ಪಂಚಾಯಿತಿ ಆಡಳಿತ ಕಚೇರಿ ಮುಂತಾದವುಗಳನ್ನು ನಿರ್ಮಿಸಲು ಎಲ್ಲಾ ರೀತಿಯ ಕಾರ್ಯ ಯೋಜನೆಗಳನ್ನು ಈಗಾಗಲೇ ರೂಪಿಸಲಾಗಿದೆ ಎಂದರು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ತಾಲೂಕು ಕೇಂದ್ರಕ್ಕೆ ಬೇಕಿರುವ ಅಗತ್ಯ ಕಚೇರಿಗಳ ಕಾಮಗಾರಿಗಳನ್ನು ಮಂಜೂರು ಮಾಡಿಸುವಲ್ಲಿ ಶಾಸಕರ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ ಎಂದರು. ಹಲವು ಸಮಾಜಮುಖಿ ಚಟುವಟಿಕೆಗಳಿಗೆ ಅಂಬೇಡ್ಕರ್ ಭವನ ಬಳಕೆಯಾಗುವಂತಾಗಲಿ ಎಂದು ಆಶಿಸಿದರು.
ಪುರಸಭೆ ಅಧ್ಯಕ್ಷೆ ಜಯಲಕ್ಷಿö್ಮ ಚಂದ್ರ, ಸದಸ್ಯ ಜೈವರ್ಧನ್, ಮಾಜಿ ಸದಸ್ಯ ಹೆಚ್.ಡಿ.ಚಂದ್ರು ಮಾತನಾಡಿದರು. ಈ ಸಂದರ್ಭ ಪುರಸಭೆ ಉಪಾಧ್ಯಕ್ಷೆ ಪುಟ್ಟಲಕ್ಷಿö್ಮ, ಜಿ.ಪಂ. ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ, ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ್ ಗುಂಡುರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ತಹಶೀಲ್ದಾರ್ ಕಿರಣ್ ಗೌರಯ್ಯ, ತಾ.ಪಂ. ಇಒ ಪರಮೇಶ್ವರ್, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಸೇರಿದಂತೆ ಪುರಸಭೆ ಸದಸ್ಯರುಗಳು, ದಲಿತ ಸಂಘಟನೆಗಳ ಮುಖಂಡರು, ಪಕ್ಷದ ಪ್ರಮುಖರು ಇದ್ದರು.