ಮಡಿಕೇರಿ, ಜೂ. ೨೦: ವಸತಿ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ವಿಶೇಷ ಸಭೆ ನಡೆಸಿದರು.
ಬೆಂಗಳೂರಿನ ವಸಂತನಗರದ ಅಲ್ಪಸಂಖ್ಯಾತರ ಇಲಾಖೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ನೇತೃತ್ವದಲ್ಲಿ ವೀರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತರ ಮುಖಂಡರೊAದಿಗೆ ಸಭೆ ನಡೆಸಲಾಯಿತು. ವೀರಾಜಪೇಟೆ ಕ್ಷೇತ್ರದ ವ್ಯಾಪ್ತಿಯ ಮಸೀದಿ, ಖಬರಸ್ಥಾನ, ಶಾದಿ ಮಹಲ್, ಚರ್ಚ್ ಹಾಗೂ ಅಲ್ಪಸಂಖ್ಯಾತರ ಆರ್ಥಿಕ, ಶೈಕ್ಷಣಿಕ, ಮೂಲ ಸೌಲಭ್ಯಗಳ ಕಾಮಗಾರಿಗಳಿಗೆ ಕೂಡಲೇ ಕ್ರಮ ವಹಿಸಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.