ಮಡಿಕೇರಿ, ಜೂ. ೨೦: ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಸ್ಕೀಮ್ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್ ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದರು. ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಎಂವಿಎಸ್‌ಗೆ ತ್ವರಿತ ಅನುಮೋದನೆ ನೀಡಬೇಕಾಗಿದೆ ಎಂದು ಮಡಿಕೇರಿ ವಿಭಾಗದ ಗ್ರಾಮೀಣ ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದರು ಎಂದು ಸಂಸದರು ವಿವರಿಸಿದ್ದಾರೆ.

ಈ ಸಂಬAಧ ಕೊಡಗು ಜಿಲ್ಲೆಯವರ ನೀರಿನ ಸಮಸ್ಯೆ ನೀಗಿಸಲು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇನೆ. ಮನವಿ ಸ್ವೀಕರಿಸಿದ ಸಚಿವರು, ಸಂಬAಧಪಟ್ಟ ಅಧಿಕಾರಿಗಳಿಗೆ ಕೂಡಲೇ ಮಾತನಾಡಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಕೊಡಗು-ಮೈಸೂರು ಸಂಸದ ಯದುವೀರ್ ಒಡೆಯರ್ ಭೇಟಿಯಾಗಿ ಮನವಿ ಸಲ್ಲಿಸಿದರು.

ವಿಶ್ವದ ಯೋಗ ರಾಜಧಾನಿ ಎಂದೇ ಖ್ಯಾತವಾಗಿರುವ ಮೈಸೂರಿನಲ್ಲಿ ಸಣ್ಣ ಮತ್ತು ಸಮುದಾಯ ಸಂಸ್ಥೆಗಳು ಸ್ವಯಂ ಪ್ರೇರಣೆಯಿಂದ ಅತಿ ಕಡಿಮೆ ಶುಲ್ಕದಲ್ಲಿ ಯೋಗ ತರಬೇತಿ ಸೇವೆ ನೀಡುತ್ತಿವೆ. ಈ ಯೋಗ ಶಾಲೆಗಳನ್ನು ಫಿಟ್‌ನೆಸ್ ಸೆಂಟರ್ ಅಥವಾ ಜಿಮ್‌ಗಳ ಸಾಲಿನಲ್ಲಿ ಸೇರಿಸಿ ಶೇ. ೧೮ ಜಿಎಸ್‌ಟಿ ವಿಧಿಸಲಾಗುತ್ತಿದೆ. ಇದರಿಂದ ಯೋಗ ಸಂಸ್ಥೆಗಳಿಗೆ ಸಮಸ್ಯೆ ಉಂಟಾಗುತ್ತಿರುವುದರ ಕುರಿತು ಸಚಿವರ ಗಮನ ಸೆಳೆದರು.

ಯೋಗ ದಿನಾಚರಣೆಗೆ ದಿನಗಣನೆ ಆರಂಭವಾಗಿರುವ ಈ ಸಂದರ್ಭದಲ್ಲಿ ಯೋಗ ಶಾಲೆಗಳಿಗೆ ವಿಧಿಸುತ್ತಿರುವ ಜಿಎಸ್‌ಟಿ ಮರು ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದರು. ಒಳನಾಡಿನ ಕಸ್ಟಮ್ಸ್ ಕ್ಲಿಯರೆನ್ಸ್ಗೆ ಅನುಕೂಲವಾಗುವಂತೆ ಕಸ್ಟಮ್ಸ್ ಕಚೇರಿಯನ್ನು ಸ್ಥಾಪಿಸಲು ಕೋರಿದರು.

ಮನವಿಗೆ ಸಕಾರಾತ್ಮಕವಾಗಿ ಸಚಿವರು ಸ್ಪಂದಿಸಿದ್ದು, ಆದಷ್ಟು ಬೇಗ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಯದುವೀರ್ ತಿಳಿಸಿದ್ದಾರೆ. ಇದೇ ವೇಳೆ ಕರಿಮೆಣಸು ವಹಿವಾಟಿನ ಮೇಲಿನ ಶೇ. ೧೮ ಜಿಎಸ್‌ಟಿಯನ್ನು ರದ್ದು ಮಾಡಿದ್ದಕ್ಕೆ ಕೊಡಗು ಜಿಲ್ಲೆಯ ಜನರ ಪರವಾಗಿ ಕೃತಜ್ಞತೆ ಸಲ್ಲಿಸಿದರು.