ಮಡಿಕೇರಿ, ಜೂ. ೨೦: ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವಲ್ಲಿ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಮಿಷನ್ ವಾತ್ಸಲ್ಯ ಯೋಜನೆ ಅನುಷ್ಠಾನ ಸಂಬAಧ ಜಿಲ್ಲಾ ಮಕ್ಕಳ ಕಲ್ಯಾಣ ಹಾಗೂ ರಕ್ಷಣಾ ಸಮಿತಿ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಾಲ್ಯ ವಿವಾಹ ತಡೆಯುವಲ್ಲಿ ಜಿಲ್ಲೆಯ ಹಾಡಿಗಳು, ಲೈನ್‌ಮನೆಗಳು ಸೇರಿದಂತೆ ಗ್ರಾಮ ಮಟ್ಟದಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಕಾಯ್ದೆ ಕಾನೂನುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಸೂಚಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ಮಾಹಿತಿ ನೀಡಿ, ಕಳೆದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬಾಲ್ಯ ವಿವಾಹ ಸಂಬAಧಿಸಿದAತೆ ೩ ಪ್ರಕರಣ ದಾಖಲಾಗಿದ್ದು, ಈಗಾಗಲೇ ಎರಡು ಬಾಲ್ಯ ವಿವಾಹ ಪ್ರಕರಣ ತಡೆಯಲಾಗಿದೆ. ಉಳಿದಂತೆ ಒಂದು ಪ್ರಕರಣ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದರು.
ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಈರಸ್ವಾಮಿ ಅವರು ಮಾಹಿತಿ ನೀಡಿ ಸರ್ಕಾರ ೧೮ ವರ್ಷದೊಳಗಿನ ಸಂಕಷ್ಟದಲ್ಲಿರುವ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆಯನ್ನು ಜಾರಿಗೊಳಿಸಿದ್ದು, ಮಕ್ಕಳಿಗೆ ಪೌಷ್ಟಿಕ ಆಹಾರ, ಶಿಕ್ಷಣ, ಜೊತೆಗೆ ಮಾಹೆವಾರು ರೂ. ೨ ಸಾವಿರ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪ್ರಾಯೋಜಕತ್ವ ಕಾರ್ಯಕ್ರಮದಡಿ ೧೮ ವರ್ಷದೊಳಗಿನ ಇಬ್ಬರು ಪೋಷಕರನ್ನು ಕಳೆದುಕೊಂಡಿರುವ ಮಕ್ಕಳು ಹಾಗೂ ಏಕಪೋಷಕರನ್ನು ಹೊಂದಿರುವ ಮಕ್ಕಳು ಹಾಗೂ ಸಜಾ ಕೈದಿಗಳ ಮಕ್ಕಳಿಗೆ ಮಾಸಿಕ ೪ ಸಾವಿರ ರೂ. ಆರ್ಥಿಕ ಧನ ಸಹಾಯ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಉಪಕಾರ್ ಯೋಜನೆಯಡಿ ಬಾಲನ್ಯಾಯ ಕಾಯ್ದೆಯಡಿ ನೋಂದಣಿಯಾಗಿರುವ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ದಾಖಲಾಗಿ ಕನಿಷ್ಟ ಮೂರು ವರ್ಷ ಸಂಸ್ಥೆಯಲ್ಲಿ ಪೋಷಣೆ ಹಾಗೂ ರಕ್ಷಣೆ ಪಡೆದು ೧೮ ವರ್ಷ ಪೂರ್ಣಗೊಳಿಸಿ ಶಿಕ್ಷಣ ಹಾಗೂ ತರಬೇತಿ ಉದ್ದೇಶದಿಂದ ಸಂಸ್ಥೆಯಿAದ ಬಿಡುಗಡೆಯಾಗುವ ಮಕ್ಕಳಿಗೆ ಮಾಸಿಕ ರೂ. ೫ ಸಾವಿರ ಒದಗಿಸುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು. ಮಕ್ಕಳಿಗೆ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಉಚಿತವಾಗಿ ಕರೆಮಾಡಿ ಮಾಹಿತಿ ಒದಗಿಸುವಲ್ಲಿ ಮಕ್ಕಳ ಸಹಾಯವಾಣಿ ೧೦೯೮ ಘಟಕವನ್ನು ಪ್ರಾರಂಭಿಸಲಾಗಿದ್ದು, ೨೮ ದೂರುಗಳು ದಾಖಲಾಗಿವೆ. ಮಕ್ಕಳ ಕಲ್ಯಾಣ ಸಮಿತಿ, ಬಾಲ ನ್ಯಾಯ ಮಂಡಳಿಯು ಸಹ ಕರ್ತವ್ಯ ನಿರ್ವಹಿಸುತ್ತಿದೆ ಎಂದರು. ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.