ಸೋಮವಾರಪೇಟೆ, ಜೂ. ೨೦: ಕಾಡಾನೆ ಮತ್ತು ಕಾಡು ಪ್ರಾಣಿಗಳಿಂದ ಗ್ರಾಮಸ್ಥರು ಹಾಗೂ ಕೃಷಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ಯಡವಾರೆ, ಕಾಜೂರು ಮತ್ತು ಐಗೂರಿನ ಗ್ರಾಮಸ್ಥರು ಕೊಡಗು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಭಾಗಗಳಲ್ಲಿ ಕಾಡಾನೆ ಸೇರಿದಂತೆ ಕಾಡು ಪ್ರಾಣಿಗಳ ನಿರಂತರ ಹಾವಳಿಯಿಂದ ಸಾಕಷ್ಟು ಸಮಸ್ಯೆಯಾಗಿದೆ. ವಿಷಯಕ್ಕೆ ಸಂಬAಧಿಸಿದAತೆ ಮೂರು ತಿಂಗಳ ಹಿಂದೆ ಗ್ರಾಮಸ್ಥರು ನಡೆಸಿದ ಸಭೆಗೆ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ರೈತರ ಅಹವಾಲುಗಳನ್ನು ಆಲಿಸಿ ಮುಂದಿನ ಒಂದು ತಿಂಗಳ ಒಳಗೆ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ಪರಿಹಾರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಕಾಮಗಾರಿ ಸರಿಯಾಗಿ ನಡೆದಿಲ್ಲ. ಇಲ್ಲಿ ಅಳವಡಿಸಿರುವ ಸೋಲಾರ್ ತಂತಿ ಬೇಲಿ ಪ್ರಯೋಜನಕ್ಕೆ ಇಲ್ಲದಂತಾಗಿದೆ. ಈ ಭಾಗದಲ್ಲಿ ಹಾವಳಿ ನಡೆಸುತ್ತಿರುವ ಪುಂಡಾನೆಗಳನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಲು ಮನವಿ ಮಾಡಲಾಗಿತ್ತು. ಆದರೆ ಕ್ರಮ ವಹಿಸಿಲ್ಲ. ಯಡವನಾಡು ಮತ್ತು ಯಡವಾರೆ ಗ್ರಾಮಗಳ ರಸ್ತೆಯ ಎರಡೂ ಬದಿಯಲ್ಲಿ ಬೆಳೆದಿರುವ ಕಾಡು ಮರಗಳನ್ನು ತೆರವುಗೊಳಿಸಲು ಶಾಸಕರು ಸೂಚಿಸಿದ್ದರು. ಆದರೆ, ಐದಾರು ಮರಗಳನ್ನು ಮಾತ್ರ ತೆರವುಗೊಳಿಸಲಾಗಿದೆ. ಈ ಭಾಗದಲ್ಲಿ ಹತ್ತು ಹಲವು ಸಮಸ್ಯೆಗಳಿದ್ದು, ಕೂಡಲೇ ಬಗೆಹರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭ ಗ್ರಾಮ ಅರಣ್ಯ ಸಂರಕ್ಷಣಾ ಸಮಿತಿ ಸದಸ್ಯರಾದ ಮಚ್ಚಂಡ ಅಶೋಕ್, ಕೆ.ಪಿ. ರಾಯ್, ಕೆ.ಬಿ. ಧೀರಜ್, ಎಂ.ಎಸ್. ಪಿಂಕು, ಎಂ.ಎA. ಮನು, ಟಿ.ಜೆ. ಸಂದೇಶ್, ಡಿ.ಪಿ. ಕೃಷ್ಣಪ್ಪ, ಸಿ.ಆರ್. ಪಾಪು ಸೇರಿದಂತೆ ಇತರರು ಇದ್ದರು.