ಸೋಮವಾರಪೇಟೆ, ಜೂ. ೨೦: ನರೇಂದ್ರ ಮೋದಿ ಅವರು ಪ್ರಧಾನಿ ಗಳಾಗಿ ೧೧ ವರ್ಷಗಳು ಪೂರೈಸಿದ ಹಿನ್ನೆಲೆ ವಿಕಸಿತ ಭಾರತದ ಅಮೃತ ಕಾಲದ ಅಂಗವಾಗಿ ಸೇವೆ, ಸುಶಾಸನ, ಬಡವರ ಕಲ್ಯಾಣ ಘೋಷಣೆಯಡಿ ಬಿ.ಜೆ.ಪಿ. ಸೋಮವಾರಪೇಟೆ ಮಂಡಲದಿAದ ಮಂಡಲ ಕಾರ್ಯಾಗಾರ ನಡೆಯಿತು. ಪಟ್ಟಣದಲ್ಲಿರುವ ಬಿ.ಜೆ.ಪಿ. ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭಾಗವಹಿಸಿ ಮಾತನಾಡಿ, ಕಳೆದ ೧೧ ವರ್ಷಗಳ ಹಿಂದೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ಅವರು ಈವರೆಗೆ ಒಂದೇ ಒಂದು ಕಪ್ಪುಚುಕ್ಕೆ ಅಂಟಿಸಿಕೊಳ್ಳದAತೆ ಪಾರದರ್ಶನ ಆಡಳಿತ ನೀಡುತ್ತಿದ್ದಾರೆ ಎಂದು ಅಭಿಪ್ರಾಯಿಸಿದರು. ದೇಶದ ಎಲ್ಲಾ ವರ್ಗದ ಮಂದಿಯ ಅಭ್ಯುದಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಧಿಕಾರವನ್ನು ದೇಶದ ಸೇವೆ ಎಂಬAತೆ ನಿರ್ವಹಿಸುತ್ತಿದ್ದಾರೆ. ಭ್ರಷ್ಟಾಚಾರಕ್ಕೆ ಆಸ್ಪದ ನೀಡದೇ ಆಡಳಿತ ನಡೆಸುತ್ತಿರುವ ಮೋದಿ ಅವರಿಂದಾಗಿ ದೇಶ ಪ್ರಗತಿಯ ಪಥದತ್ತ ಹೆಜ್ಜೆಹಾಕಿದೆ. ಸೈನಿಕರಿಂದ ಹಿಡಿದು ರೈತರವರೆಗೆ ಸವಲತ್ತುಗಳನ್ನು ಒದಗಿಸುತ್ತಿದ್ದಾರೆ ಎಂದರು.
ಜನ್‌ಧನ್, ಜನೌಷಧ್, ಉಜ್ವಲ ಯೋಜನೆಯಡಿ ಉಚಿತ ಅಡುಗೆ ಅನಿಲ ಸಂಪರ್ಕ, ಕುಟುಂಬದ ಪ್ರತಿ ಸದಸ್ಯರಿಗೆ ಉಚಿತ ಅಕ್ಕಿ, ರೈತ ಸಮ್ಮಾನ್ ಯೋಜನೆ, ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವು ಸೇರಿದಂತೆ ಅನೇಕ ಯೋಜನೆಗಳನ್ನು ಮೋದಿ ಜಾರಿಗೆ ತಂದಿದ್ದಾರೆ. ಇದರೊಂದಿಗೆ ಸೈನ್ಯಕ್ಕೆ ಹೆಚ್ಚಿನ ಶಕ್ತಿ ನೀಡಿದ್ದಾರೆ. ಅಂತರರಾಷ್ಟಿçÃಯ ಮಟ್ಟದಲ್ಲಿ ಭಾರತದ ಘನತೆ ಹೆಚ್ಚಿಸಿದ್ದಾರೆ ಎಂದು ಅಪ್ಪಚ್ಚು ರಂಜನ್ ಹೇಳಿದರು.
ಪ್ರಧಾನಿ ಮೋದಿಯವರ ಸರ್ಕಾರದ ಸಾಧನೆಯ ಬಗ್ಗೆ ಕಾರ್ಯಕರ್ತರು ಪ್ರತಿ ಮನೆಗೂ ಮಾಹಿತಿ ನೀಡಬೇಕು. ಯೋಜನೆಗಳ ಪ್ರಯೋಜನ ಲಭ್ಯವಾಗುವಂತೆ ಮಾಡಬೇಕೆಂದು ಇದೇ ಸಂದರ್ಭ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಜೆ.ಪಿ. ಮಂಡಲ ಅಧ್ಯಕ್ಷ ಗೌತಮ್ ಗೌಡ ವಹಿಸಿದ್ದರು. ಮಾಜಿ ಎಂ.ಎಲ್ಸಿ. ಎಸ್.ಜಿ. ಮೇದಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಜಿಲ್ಲಾ ಉಪಾಧ್ಯಕ್ಷ ಮನು ರೈ, ಜಿಲ್ಲಾ ಕಾರ್ಯದರ್ಶಿ ಅನಂತ್ ಕುಮಾರ್, ಆರ್.ಕೆ. ಚಂದ್ರು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ತಿಮ್ಮಯ್ಯ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದರ್ಶನ್ ಜೋಯಪ್ಪ, ಮೋಕ್ಷಿಕ್ ರಾಜ್, ಸೋಮೇಶ್ ಹಾಗೂ ಮೋರ್ಚಾ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಅಧ್ಯಕ್ಷರು, ಮಂಡಲ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.