ಮಡಿಕೇರಿ, ಜೂ. ೨೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ ತಡೆ ದಿನಾಚರಣೆಯು ನಗರದ ಶ್ರೀ ಶಕ್ತಿ ವೃದ್ಧಾಶ್ರಮದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ಹಿರಿಯ ನಾಗರಿಕರಿಗೆ ಆಗುವ ದೌರ್ಜನ್ಯಗಳನ್ನು ತಡೆಯಲು ಸರ್ಕಾರವು ಶ್ರಮಿಸುತ್ತಿರುವುದಾಗಿ ಹಾಗೂ ಇಲಾಖೆಗಳ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಹಿರಿಯ ನಾಗರಿಕರ ದೌರ್ಜನ್ಯಕ್ಕೆ ಸಂಬAಧಪಟ್ಟAತೆ ಕಾನೂನಿನ ನೆರವು ನೀಡಲು ಕಾನೂನು ಸೇವೆಗಳ ಪ್ರಾಧಿಕಾರದ ಅವಕಾಶ ಬಳಸಿಕೊಳ್ಳುವಂತೆ ಕೋರಿದರು.

ಹಿರಿಯ ನಾಗರಿಕರಿಗೆ ತಮ್ಮಗಳ ಅನುಭವದ ಬುತ್ತಿಯಲ್ಲಿ ಇರುವ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳುವAತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸಹಾಯವಾಣಿ ಕೇಂದ್ರದ ತೀರ್ಥ ಕುಮಾರ, ಶ್ರೀ ಶಕ್ತಿ ವೃದ್ಧಾಶ್ರಮದ ವ್ಯವಸ್ಥಾಪಕ ಸತೀಶ್ ಹಾಗೂ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಯಪ್ಪ ನಿರೂಪಿಸಿದರು. ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ವಿಮಲ ಸ್ವಾಗತಿಸಿದರು.