ಮಡಿಕೇರಿ, ಜೂ. ೨೧: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‌ಎಫ್) ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು. ಆಸಕ್ತರು ತಾ.೩೦ ರೊಳಗೆ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪.೩೦ ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ೦೮೨೧-೨೫೧೫೯೪೪ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಅವರು ತಿಳಿಸಿದ್ದಾರೆ.