ಕುಶಾಲನಗರ, ಜೂ. ೨೧: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ದೇವಾಲಯದ ಜೀರ್ಣೋದ್ಧಾರ ಕಾಮಗಾರಿಯ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ ಅವರು ದೇವಾಲಯದ ಆವರಣಕ್ಕೆ ಭೇಟಿ ಮಾಡಿ ದೇವಾಲಯದ ಆಡಳಿತ ಮಂಡಳಿ ಸದಸ್ಯರೊಂದಿಗೆ ಚರ್ಚಿಸಿದರು.

ದೇವಾಲಯ ಜೀರ್ಣೋದ್ಧಾರ ಸಮಿತಿ ಮೂಲಕ ೨ ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಸಂಬAಧ ದೇವಸ್ಥಾನ ಟ್ರಸ್ಟ್ ಅಧ್ಯಕ್ಷÀ ಬಿ.ಪಿ. ಗಣಪತಿ ಮತ್ತು ಪ್ರಮುಖರು ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಶಿಥಿಲಾವಸ್ಥೆಗೊಂಡಿದ್ದ ದೇವಾಲಯದ ಜೀರ್ಣೋದ್ಧಾರ ಕೆಲಸಕ್ಕೆ ಆದ್ಯತೆ ಮೇರೆಗೆ ಸರಕಾರದ ಮೂಲಕ ಹೆಚ್ಚಿನ ಸಹಾಯಧನ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಶಾಸಕರು ಸರಕಾರದ ಮೂಲಕ ಹೆಚ್ಚಿನ ಅನುದಾನ ಕಲ್ಪಿಸುವ ಭರವಸೆ ವ್ಯಕ್ತಪಡಿಸಿದರು. ಇದರೊಂದಿಗೆ ವೈಯಕ್ತಿಕವಾಗಿ ಕೂಡ ಸಹಕಾರ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದರು. ಈ ಸಂದರ್ಭ ಮಾತನಾಡಿದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಪಿ. ಗಣಪತಿ ೨೦೨೭ರ ಒಳಗೆ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ಪೂರ್ಣಗೊಳ್ಳಲಿವೆ. ಈ ಸಂದರ್ಭ ಸರಕಾರದಿಂದ ಅನುದಾನದ ಬಗ್ಗೆ ಶಾಸಕರ ಮೂಲಕ ಮನವಿ ಪತ್ರ ಸಲ್ಲಿಸಲಾಗಿದೆ. ಜೊತೆಗೆ ದಾನಿಗಳಿಂದ ಕೂಡ ಅಗತ್ಯ ನೆರವು ಪಡೆಯುವ ಮೂಲಕ ಕಾವೇರಿ ನದಿ ತಟದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ನಿರ್ಮಾಣ ಕಾರ್ಯ ನಡೆಯಲಿದೆ ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷÀ ಪ್ರಮೋದ್ ಮುತ್ತಪ್ಪ, ಮಾಜಿ ಅಧ್ಯಕ್ಷ ಮಂಜುನಾಥ ಗುಂಡುರಾವ್, ನಗರ ಕಾಂಗ್ರೆಸ್ ಅಧ್ಯಕ್ಷÀ ಜೋಸೆಫ್ ವಿಕ್ಟರ್ ಸೋನ್ಸ್, ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖ ಕೆ.ಎಸ್. ಶ್ರೀನಿವಾಸರಾವ್ ಚಂದ್ರು, ಜೀರ್ಣೋದ್ಧಾರ ಸಮಿತಿ ಸಂಚಾಲಕÀ ವಿ.ಎಸ್. ಆನಂದಕುಮಾರ್, ಡಿ.ಪಿ. ಗಿರೀಶ್, ವಿನೋದ್ ಜೈನ್ , ವಸಂತ್, ಯಶವಂತ್ ಮತ್ತಿತರರು ಇದ್ದರು.