ಮಡಿಕೇರಿ, ಜೂ. ೨೧: ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಎಸ್‌ಎಸ್‌ಎಲ್‌ಸಿ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ವಿದ್ಯಾರ್ಥಿಗಳು ದ್ವಿತೀಯ/ಅಂತಿಮ ವರ್ಷದ ಪಿಯುಸಿಯನ್ನು ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರಬೇಕು. ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ವತಿಯಿಂದ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದವರೂ ಸಹ ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಪಡೆಯಲು ಅರ್ಹರಿರುತ್ತಾರೆ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಕೋರ್ಸುಗಳನ್ನು ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅರ್ಹರಾಗಿರುತ್ತಾರೆ. ಆದರೆ ಹೊರ ದೇಶಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಈ ಯೋಜನೆಯಡಿ ಬಹುಮಾನ ಹಣ ಪಡೆಯಲು ಅರ್ಹರಲ್ಲ.

ಆನ್‌ಲೈನ್ ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಅಭ್ಯರ್ಥಿಯ ಫೋಟೋ, ಎಸ್.ಎಸ್.ಎಲ್.ಸಿ. ಅಂಕ ಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್,

ದ್ವಿತೀಯ ಪಿ.ಯು.ಸಿ: ಅಭ್ಯರ್ಥಿಯ ಫೋಟೋ, ದ್ವಿತೀಯ ಪಿ.ಯು.ಸಿ. ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಬುಕ್, ಪದವಿ, ಸ್ನಾತಕೋತ್ತರ ಪದವಿ, ಕೃಷಿ, ಪಶುಸಂಗೋಪನೆ, ಇಂಜಿನಿಯರಿAಗ್, ಮೆಡಿಕಲ್ ಅಭ್ಯರ್ಥಿಯ ಫೋಟೋ, ಎಲ್ಲಾ ಸೆಮ್‌ಗಳ ಅಂಕಪಟ್ಟ, ಎಸ್.ಎಸ್.ಎಲ್.ಸಿ. ಅಂಕಪಟ್ಟ, ಆಧಾರ್ ಪ್ರತಿ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಬುಕ್ ಸಲ್ಲಿಸಬೇಕು.

ವಿದ್ಯಾರ್ಥಿಗಳು (ತಿತಿತಿ.sತಿ.ಞಚಿಡಿ.ಟಿiಛಿ.iಟಿ)ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಯಾವುದಾದರೂ ತಾಂತ್ರಿಕ ತೊಂದರೆಯಾದಲ್ಲಿ ಇಲಾಖೆಯ ಟೋಲ್ ಫ್ರೀ ದೂರವಾಣಿ ಸಂಖ್ಯೆ ೦೮೦-೨೨೬೩೪೩೦೦, ೦೮೦-೨೨೩೫೩೭೫೭ ಅಥವಾ ಸಹಾಯಕ ನಿರ್ದೇಶಕರು (ಗ್ರೇಡ್-೨) ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ದೂರವಾಣಿ ಸಂಖ್ಯೆ ೯೪೮೦೮೮೪೩೧೫೬ ಮತ್ತು ೦೮೨೭೬-೨೮೧೧೧೫ ನ್ನು ಸಂಪರ್ಕಿಸಬಹುದು ಎಂದು ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.