ಸುಂಟಿಕೊಪ್ಪ, ಜೂ. ೨೧: ಶಿಕ್ಷಣವನ್ನು ಉತ್ತೇಜಿಸುವ ಸಲುವಾಗಿ ಸರಕಾರ ಹಾಗೂ ದಾನಿಗಳು ಸಹಕಾರ ನೀಡುತ್ತಿರುವುದು ಆಶಾದಾಯಕ ವಿಚಾರ. ಮಕ್ಕಳು ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ಶಿಕ್ಷಣದತ್ತ ಚಿತ್ತ ಇರಿಸುವಂತೆ ಸುಂಟಿಕೊಪ್ಪ ಗ್ರೇಡ್ ೧ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್ ಕರೆ ನೀಡಿದರು.

ಗದ್ದೆಹಳ್ಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಪ್ರೌಢಶಾಲೆ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಾನಿಗಳಾದ ಪಿ.ಎಂ. ಲತೀಫ್ ಅವರು ನೀಡಿರುವ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಶಿಕ್ಷಣ ಪಡೆದು ಸಮಾಜದ ಉತ್ತಮ ಪ್ರಜೆಗಳಾಗಿ ಮೂಡಿಬರುವ ಮೂಲಕ ಪೋಷಕರು ಮತ್ತು ತಾವು ಕಲಿತ ಶಾಲೆಯನ್ನು ಉತ್ತುಂಗ ಶಿಖರಕ್ಕೆ ಏರಿಸುವಂತಾಗಬೇಕು.

ಈ ಶಾಲೆಯಲ್ಲಿ ಹಂತ ಹಂತವಾಗಿ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಸುತ್ತಮುತ್ತಲಿನ ಗ್ರಾಮದ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಗ್ರಾಮದ ಹಿರಿಯರು ಶ್ರಮವಹಿಸಿ ಕಟ್ಟಿಸಿದ ಪ್ರಾಥಮಿಕ ಸರಕಾರಿ ಶಾಲೆಯನ್ನು ಉಳಿಸುವಂತಾಗಬೇಕು. ಶಿಕ್ಷಕರೊಂದಿಗೆ ಪೋಷಕರು ಗ್ರಾಮಸ್ಥರು ಸಹಕರಿಸುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಪುಸ್ತಕ ದಾನಿ ಪಿ.ಎಂ. ಲತೀಫ್ ಮಾತನಾಡಿ, ಸರಕಾರ ಸೇರಿದಂತೆ ದಾನಿಗಳು ಶಿಕ್ಷಣಕ್ಕೆ ಸಹಾಯಹಸ್ತ ನೀಡುತ್ತಿದ್ದು, ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಂಡು ಸತ್ಪಪ್ರಜೆಗಳಾಗಬೇಕು. ಮುಂದಿನ ದಿನಗಳಲ್ಲಿಯೂ ಶಿಕ್ಷಣ ಸಂಸ್ಥೆ ಬೇಕಾಗಿರುವ ಮೂಲಭೂತ ಸವಲತ್ತುಗಳನ್ನು ಒದಗಿಸಲು ಮುಂದಾಗುವುದಾಗಿ ಭರವಸೆ ನೀಡಿದರು. ಸುಸಜ್ಜಿತ ವಿದ್ಯಾರ್ಥಿ ನಿಲಯವನ್ನು ಮುಚ್ಚುತ್ತಿರುವುದರಿಂದ ಈ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ಹಿನ್ನಡೆಯುಂಟಾಗಲಿದೆ. ಪೋಷಕರಿಗೂ ಮಕ್ಕಳ ಭವಿಷ್ಯಕ್ಕೆ ಮುಳುವಾಗುವುದರೊಂದಿಗೆ ಚಿಂತೆಗೀಡುಪಡುವAತಾಗಿದೆ. ಸಂಬAಧಿಸಿದ ಅಧಿಕಾರಿಗಳು ಇತ್ತ ಗಮನಹರಿಸಿ ಈ ವಿದ್ಯಾರ್ಥಿನಿಲಯವನ್ನು ಮುಚ್ಚದಂತೆ ಲತೀಫ್ ಆಗ್ರಹಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಅಧ್ಯಕ್ಷ ಎಂ.ಎಸ್. ಸುನಿಲ್ ವಹಿಸಿದ್ದರು.

ಈ ಸಂದರ್ಭ ವೇದಿಕೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಅನಿತಾ, ಗ್ರಾ.ಪಂ. ಮಾಜಿ ಅಧ್ಯಕ್ಷ ಕೆ.ಇ. ಕರೀಂ, ಉಪಾಧ್ಯಕ್ಷ ಪಿ.ಆರ್. ಸುಕುಮಾರ್, ಸುಂಟಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಆರ್.ಹೆಚ್. ಶರೀಫ್, ಸಿ. ಮಹೇಂದ್ರ, ಬಿ.ಕೆ. ಮೋಹನ್, ವಾಸು, ಎಸ್.ಪಿ. ಸಂದೀಪ್, ರಜಾಕ್, ಹರೀಶ್, ಅಜೀಜ್, ಶಶಿಕುಮಾರ್ ರೈ, ಶಾಲಾ ಮುಖ್ಯೋಪಾಧ್ಯಾಯಿನಿ ಹೇಮಾವತಿ, ಸಹಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.