ಕೂಡಿಗೆ, ಜೂ. ೨೧: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿ ಕೂಡ್ಲೂರು ಕೈಗಾರಿಕಾ ಘಟಕದಲ್ಲಿರುವ ಎಸ್.ಎಲ್.ಎನ್. ಕಾಫಿ ಸಂಸ್ಥೆಯ ವತಿಯಿಂದ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಿಂದ ರೂ. ೭ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿ, ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರಕಾರದ ಜೊತೆಗೆ ಸಾಮಾಜಿಕ ಸಂಸ್ಥೆಗಳ ಸಹಕಾರದೊಂದಿಗೆ ಹೆಚ್ಚಿನ ಅಭಿವೃದ್ಧಿ ಪಡಿಸಲು ಅನುಕೂಲವಾಗುವುದು ಎಂದರು. ಮುಂದಿನ ದಿನಗಳಲ್ಲಿ ಗ್ರಾಮಸ್ಥರ ಬೇಡಿಕೆಗೆ ಅನುಗುಣವಾಗಿ ಸಮುದಾಯ ಭವನ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ವಹಿಸಿದ್ದರು. ಸಭೆಯಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಎಸ್.ಎಲ್.ಎನ್. ಕಾಫಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಾತಪ್ಪನ್, ವಿಶ್ವನಾಥನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್, ಪಾರ್ವತಮ್ಮ, ಖತೀಜ, ವೀರ ಹನುಮ ಸೇವಾ ಸಮಿತಿ ಅಧ್ಯಕ್ಷರುಗಳಾದ ಎನ್. ರಾಮೇಗೌಡ, ಪ್ರಮುಖರಾದ ಮಧುಕುಮಾರ್, ಮಲಪ್ಪ, ಸಜನ್ ಕಿಶೋರ್, ಯೋಗೇಶ್ ಗೌಡ, ವಿನಾಯಕ ಯುವಕ ಸಂಘದ ಅಧ್ಯಕ್ಷ ಸಿ.ಸಿ. ಸ್ವಾಮಿ, ಸೇರಿದಂತೆ ಇನ್ನಿತರರು ಹಾಜರಿದ್ದರು.