ಕುಶಾಲನಗರ, ಜೂ. ೨೧: ಸರ್ಕಾರದ ಜೊತೆಗೆ ಸೇವಾ ಸಂಸ್ಥೆಗಳು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸಿ ಉಳಿಸಿ ಬೆಳೆಸಲು ಸಾಧ್ಯ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಭಿಪ್ರಾಯಪಟ್ಟರು.

ಕುಶಾಲನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯ ಆವರಣದಲ್ಲಿ ಬಿ.ಎಸ್.ಇ. ಸಂಸ್ಥೆಯ ಸಿ.ಎಸ್.ಆರ್. ಫಂಡ್‌ನಿAದ ರೂ. ೨೫ ಲಕ್ಷ ವೆಚ್ಚದಲ್ಲಿ ಹಮ್ಮಿಕೊಂಡಿರುವ ವಿವಿಧೋದ್ದೇಶ ಸಭಾಂಗಣದ ಭೂಮಿಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರಿಂದ ಸುಶಿಕ್ಷಿತ ಸಮಾಜ ನಿರ್ಮಾಣವಾಗುತ್ತದೆ. ಸಂಘ-ಸAಸ್ಥೆಗಳ ಪ್ರೋತ್ಸಾಹ, ಸಹಕಾರ ಸಿಗುವುದರಿಂದ ಸರ್ಕಾರಿ ಶಾಲೆಗಳು ಅಭಿವೃದ್ಧಿ ಹೊಂದುತ್ತವೆ.

ಸರ್ಕಾರಿ ಶಾಲೆಗಳ ಉನ್ನತೀಕರಣ ಕಾರ್ಯದಲ್ಲಿ ಖಾಸಗಿ ಸಂಘ-ಸAಸ್ಥೆಗಳ ಸಹಭಾಗಿತ್ವ ಅಗತ್ಯ. ಈ ನಿಟ್ಟಿನಲ್ಲಿ ಸಿ.ಎಸ್.ಆರ್. ಫಂಡ್‌ನಿAದ ಶಾಲೆಗಳ ಉನ್ನತೀಕರಣ ಕಾರ್ಯಕ್ಕೆ ನೆರವು ನೀಡುತ್ತಿರುವುದು ಶ್ಲಾಘನೀಯ ಎಂದರು.

ರೆಡ್ ಕ್ರಾಸ್ ಸಂಸ್ಥೆಯ ತಾಲೂಕು ಅಧ್ಯಕ್ಷ ಎಸ್.ಕೆ. ಸತೀಶ್ ಮಾತನಾಡಿ, ಹಳೆ ವಿದ್ಯಾರ್ಥಿಗಳು, ಖಾಸಗಿ ವ್ಯಕ್ತಿಗಳು, ಕಾರ್ಪೊರೇಟ್ ಕಂಪೆನಿಗಳು, ಸರ್ಕಾರೇತರ ಸಂಸ್ಥೆಗಳು ಸರಕಾರಿ ಶಾಲೆಗಳ ಅಭಿವೃದ್ಧಿಗೆ ಕೊಡುಗೆ ನೀಡಲು ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಮುಂದಾಗಬೇಕು ಎಂದರು.

ಈ ಸಂದರ್ಭ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ವಿ.ಎಸ್. ಆನಂದ್ ಕುಮಾರ್, ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಆದಂ, ಶಾಲೆಯ ಉಪ ಪ್ರಾಂಶುಪಾಲ ಪರಮೇಶ್ವರಪ್ಪ, ಸಹ ಶಿಕ್ಷಕರಾದ ಎ.ಸಿ. ಮಂಜುನಾಥ್, ದಿನೇಶ್ ಮತ್ತಿತರರು ಇದ್ದರು.