ಕುಶಾಲನಗರ, ಜೂ. ೨೧: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣ್ಣೀರ ನೇತೃತ್ವದಲ್ಲಿ ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲೆಯ ಗಡಿಭಾಗದ ಕಾವೇರಿ ಪ್ರತಿಮೆ ಬಳಿ ಬರಮಾಡಿಕೊಂಡರು.
ಕಾವೇರಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಮಂಜುನಾಥ್, ಇದೇ ಮೊದಲ ಬಾರಿಗೆ ಕೊಡಗಿಗೆ ಭೇಟಿ ನೀಡುತ್ತಿದ್ದು ಸರ್ಕಾರ ಐದು ಗ್ಯಾರಂಟಿಗಳನ್ನು ಕೊಟ್ಟಿದೆ. ದೇಶದ ಅಭಿವೃದ್ಧಿ, ಕೃಷಿ, ಜಿಡಿಪಿ ಬೆಳವಣಿಗೆಗೆ ಪಕ್ಷ ಅನೇಕ ಕೊಡುಗೆಗಳನ್ನು ನೀಡಿದೆ. ಇದನ್ನು ಪಕ್ಷದ ಯುವ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಮನೆ ಮನೆಗೆ ತಲುಪಿಸಿ ಜನರ ಧ್ವನಿಯಾಗಬೇಕು ಎಂದರು. ೨೦೨೮ರಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.
ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ, ಉಪಾಧ್ಯಕ್ಷರಾದ ಅರ್ಜುನ್, ಸಚಿನ್, ಕುಶಾಲನಗರ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆದಂ.ಎಸ್. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪ್ರಮುಖರಾದ ನಯಾಜ್ ಸೇರಿದಂತೆ ಪ್ರಮುಖರು, ಕಾರ್ಯಕರ್ತರು ಇದ್ದರು.