ನಾಪೋಕ್ಲು, ಜೂ. ೨೧: ಶಿಕ್ಷಣಕ್ಕಾಗಿ ಸರ್ಕಾರ ನೀಡುತ್ತಿರುವ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಕರೆ ನೀಡಿದರು.

ಮಡಿಕೇರಿ ತಾಲೂಕು ಭಾಗಮಂಡಲ ಹೋಬಳಿಯ ತಾವೂರು ಗ್ರಾಮದಲ್ಲಿ, ನೂತನವಾಗಿ ನಿರ್ಮಿಸಿದ ತಾವೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಸರಕಾರವು ವಿದ್ಯಾರ್ಥಿಗಳ ಉತ್ತಮ ವಿದ್ಯಾಭ್ಯಾಸಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರಲ್ಲೂ ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ವಿದ್ಯಾಭ್ಯಾಸದಲ್ಲಿ ಅನ್ಯಾಯ ಆಗಬಾರದು ಎಂಬ ಉದ್ದೇಶದಿಂz ಸಕಲ ಸವಲತ್ತುಗಳನ್ನು ಕಲ್ಪಿಸಲು ಬದ್ಧವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಭವಿಷ್ಯಕ್ಕಾಗಿ ವಿದ್ಯಾರ್ಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.

ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ವಲಯ ಅಧ್ಯಕ್ಷ ಕೋಳಿಬೈಲು ವೆಂಕಟೇಶ್, ಕೆಡಿಪಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಗಿರೀಶ್, ರಮಾನಾಥ್ ಬೇಕಲ್, ಹರ್ಷ, ಪ್ರಕಾಶ್, ಪಕ್ಷದ ಮುಖಂಡರು,ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.