ಮಡಿಕೇರಿ, ಜೂ. ೨೫: ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ರಾಜ್ಯದ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ನಿರ್ಧರಿಸಿ, ರಾಜ್ಯದಲ್ಲಿ ಕಳೆದ ಸಾಲಿನಿಂದ ಕೃಷಿ ವಿಜ್ಞಾನಗಳ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ಕೃಷಿ ಮತ್ತು ಕೃಷಿ ಸಂಬAಧಿತ ಪದವಿ ಓದಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಲಭ್ಯ ಸೀಟುಗಳು ಕಡಿಮೆ ಇವೆ.
ರಾಜ್ಯದಲ್ಲಿ ಪ್ರತಿವರ್ಷ ಸುಮಾರು ೧ ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಕಾರ್ಯಕ್ರಮಕ್ಕೆ ದಾಖಲಾಗಲು ಅರ್ಜಿ ಸಲ್ಲಿಸಿರುತ್ತಾರೆ. ಅದರಲ್ಲಿ ಕೇವಲ ೩ ಸಾವಿರ ವಿದ್ಯಾರ್ಥಿಗಳಿಗೆ ಕೃಷಿ ಹಾಗೂ ಕೃಷಿ ಸಂಬAಧಿತ ಪದವಿ ಸೀಟುಗಳು ಹಂಚಿಕೆಯಾಗುತ್ತಿವೆ. ಉಳಿದ ವಿದ್ಯಾರ್ಥಿಗಳಿಗೆ ಈ ಪದವಿಗಳಿಗೆ ಪ್ರವೇಶ ಪಡೆಯಲು ಅವಕಾಶವಿಲ್ಲದಂತಾಗಿದೆ. ಈ ಹಿನ್ನೆಲೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಕಾಯ್ದೆ ೨೦೦೯ ರಲ್ಲಿ (ವಿಭಾಗ ೪೪ ರಿಂದ ೫೧) ವಿವರಿಸಿರುವಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಖಾಸಗಿ ಕಾಲೇಜುಗಳಿಗೆ ಅಫಿಲಿಯೇಶನ್ ನೀಡಲು ಅವಕಾಶ ಇರುವುದನ್ನು ಬಳಸಿಕೊಂಡು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಈ ಸಾಲಿನಲ್ಲಿ ಅಫಿಲಿಯೇಟೆಡ್ ಖಾಸಗಿ ಕೃಷಿ ವಿಜ್ಞಾನಗಳ ಕಾಲೇಜುಗಳನ್ನು ಪ್ರಾರಂಭಿಸಲು ಮುಂದಾಗಿದೆ. ಆಸಕ್ತಿ ಹೊಂದಿರುವ ಹಾಗೂ ಕರ್ನಾಟಕದ ಸೊಸೈಟಿ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು/ ಸೂಸೈಟಿಗಳು/ ಟ್ರಸ್ಟ್ಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಸಂಸ್ಥೆಗಳು ಬಿ.ಎಸ್ಸಿ(ಹಾನರ್ಸ್) ಕೃಷಿ ಬಿ.ಟೆ.ಕ್ ಕೃಷಿ ಇಂಜಿನಿಯರಿAಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿ.ಎಸ್ಸಿ (ಹಾನರ್ಸ್) ಅರಣ್ಯ, ಬಿ.ಎಸ್. (ಹಾನರ್ಸ್), ಕಮ್ಯೂನಿಟಿ ವಿಜ್ಞಾನ, ಬಿ.ಎಸ್ಸಿ (ಹಾನರ್ಸ್), ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ (ಹಾನರ್ಸ್) ತೋಟಗಾರಿಕೆ ಮತ್ತು ಬಿಎಸ್ಸಿ (ಹಾನರ್ಸ್) ರೇಷ್ಮೆ ಕೃಷಿ ಪದವಿ ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು.
ಈ ಸಂಬAಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಫಿಲಿಯೇಶನ್ಗಾಗಿ ಕನಿಷ್ಟ ಮಾನದಂಡಗಳನ್ನು (ಕೆಎಸ್ಎನ್ಯುಎಎಚ್ಎಸ್-ಎಂಎಸ್ಎಸಿಆರ್ ೨೦೨೫) ತಿತಿತಿ.uಚಿhs.eಜu.iಟಿ ಜಾಲತಾಣದಲ್ಲಿ ಪ್ರಕಟಿಸಿದೆ. ಅಧಿಸೂಚಿಸಿದ ಮಾನದಂಡಗಳAತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ (ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಉಡುಪಿ ಮತ್ತು ದಕ್ಷಿಣ ಕನ್ನಡ) ಜಿಲ್ಲೆಗಳಲ್ಲಿ ಕಾಲೇಜು ಅಫಿಲಿಯೇಶನ್ ಬಯಸುವ ಹಾಗೂ ಕಾನೂನು ಬದ್ದ ಶೈಕ್ಷಣಿಕ ಸಂಸ್ಥೆಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ (ಕೆಎಸ್ಎನ್ಯುಎಎಚ್ಎಸ್-ಎಂಎಸ್ಎಸಿಆರ್ ೨೦೨೫) ರ ಪ್ರಕಾರ ಅವುಗಳನ್ನು ಪರಿಶೀಲಿಸಿ ನಿಯಮದಂತೆ ಪ್ರಕ್ರಿಯೆ ನಡೆಸಲಾಗುವುದು.
ಈ ವಿಶ್ವವಿದ್ಯಾಲಯದಡಿಯಲ್ಲಿ ಅಫಿಲಿಯೇಶನ್ಗಾಗಿ ಜುಲೈ ೭ ರೊಳಗೆ ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಯನ್ನು ಆಗಾಗ್ಗೆ ಪರಿಶೀಲಿಸಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ನಿಬಂಧನೆಗಳನ್ನು ಸಂಪೂರ್ಣ ಪರಾಮರ್ಶಿಸಿ ಅದರಂತೆ ಅರ್ಜಿ ಸಲ್ಲಿಸುವುದು. ಅಪೂರ್ಣ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರ ಹಾಗೂ ನಿಬಂಧನೆಗಳು ಮತ್ತು ಅರ್ಜಿಗಾಗಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ತಿಳಿಸಿದ್ದಾರೆ.