ಕೂಡಿಗೆ, ಜೂ. ೨೫: ತೊರೆನೂರು ಗ್ರಾಮ ಪಂಚಾಯಿತಿ ಮಾಸಿಕ ಸಭೆ ಅಧ್ಯಕ್ಷೆ ಶೋಭಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ೧೫ ಮತ್ತು ೧೬ ಅನುದಾನದ ಕಾಮಗಾರಿಗಳ ಕ್ರಿಯಾ ಯೋಜನೆಯ ತಯಾರಿಸಲು ಹಾಜರಿದ್ದ ಸದಸ್ಯರು ಒತ್ತಾಯಿಸಿ ತಮ್ಮ ತಮ್ಮ ವಾರ್ಡ್ನ ಕಾಮಗಾರಿಗಳ ಪಟ್ಟಿಯನ್ನು ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಜೊತೆಯಲ್ಲಿ ಶುಚಿತ್ವಕ್ಕೆ ಹೆಚ್ಚು ಗಮನ ಹರಿಸುವ ಬಗ್ಗೆ ಚರ್ಚೆಗಳು ನಡೆದವು.
ಸಭೆಗೆ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸರಕಾರದ ಹೊಸ ಯೋಜನೆಗಳ ಬಗ್ಗೆ ಮತ್ತು ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ಸವಿಸ್ತಾರವಾದ ಮಾಹಿತಿಯನ್ನು ಒದಗಿಸಿದರು. ಅಧ್ಯಕ್ಷತೆ ವಹಿಸಿದ್ದ ಶೋಭಾ ಪ್ರಕಾಶ್ ಮಾತನಾಡಿ, ಸದಸ್ಯರ ಅಭಿಪ್ರಾಯಗಳನ್ನು ಈಗಾಗಲೇ ಸಭೆಯ ನಡವಳಿಕೆಯ ಪುಸ್ತಕದಲ್ಲಿ ನೋಂದಣಿ ಮಾಡಲಾಗಿದೆ. ಅದರನ್ವಯ ಅಭಿವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ, ಅದರ ಮೂಲಕ ಕಾಮಗಾರಿಗಳನ್ನು ಕಾರ್ಯಗತಗೊಳಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪಾಧ್ಯಕ್ಷೆ ರೂಪ ಮಹೇಶ್, ಸದಸ್ಯರಾದ ಶಿವಕುಮಾರ್, ದೇವರಾಜ್, ನಿಂಗಜಾಮ್ಮ ತೀರ್ಥಾನಂದ, ಮಹದೇವ, ಸೇರಿದಂತೆ ಅಭಿವೃದ್ಧಿ ಅಧಿಕಾರಿ ಶ್ಯಾಮ್ ಸೇರಿದಂತೆ ಸಿಬ್ಬಂದಿ ವರ್ಗದವರು ಹಾಜರಿದ್ದರು.