ಮಡಿಕೇರಿ, ಜೂ. ೨೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ನಾಡಪ್ರಭು ಕೆಂಪೇಗೌಡರ ಜಯಂತಿ ತಾ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.

ಶಾಸಕ ಡಾ. ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಮತ್ತು ಶಾಸಕ ಎ.ಎಸ್. ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ನಗರಸಭೆ ಅಧ್ಯಕ್ಷೆ ಪಿ. ಕಲಾವತಿ, ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ, ಕೊಡಗು ಜಿಲ್ಲಾ ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ್ ಕರಂದ್ಲಾಜೆ, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್, ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಇತರರು ಪಾಲ್ಗೊಳ್ಳಲಿದ್ದಾರೆ. ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ನಾಗರಾಜು ಉಪನ್ಯಾಸ ನೀಡಲಿದ್ದಾರೆ.