ಕುಶಾಲನಗರ, ಜೂ. ೨೫ : ಕುಶಾಲನಗರ ಪಟ್ಟಣದಲ್ಲಿ ನಿರ್ಮಾಣವಾಗಿರುವ ನೂತನ ಪುರಸಭಾ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಆರಂಭಿಸಿದೆ. ಕಳೆದ ೮ ವರ್ಷಗಳ ಕಾಲ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟ್ಟಣ ಪಂಚಾಯಿತಿ ಕಚೇರಿ ಇದೀಗ ಸಂಪೂರ್ಣವಾಗಿ ನೂತನ ಪುರಸಭಾ ಕಾರ್ಯಾಲಯಕ್ಕೆ ಸ್ಥಳಾಂತರ ಗೊಂಡಿದ್ದು ಪುರಸಭಾ ವ್ಯಾಪ್ತಿಯ ಜನರಿಗೆ ಸೇವೆ ನೀಡುವಲ್ಲಿ ತೊಡಗಿಸಿಕೊಂಡಿದೆ. ಸಾರ್ವಜನಿಕ ದೈನಂದಿನ ಕೆಲಸ ಕಾರ್ಯಗಳು ಸುಗಮವಾಗಿ ನಡೆಯುವಂತೆ ಪ್ರತ್ಯೇಕ ವಿಭಾಗಗಳನ್ನು ತೆರೆಯಲಾಗಿದೆ ಎಂದು ತಿಳಿಸಿರುವ ಪುರಸಭೆ ಮುಖ್ಯ ಅಧಿಕಾರಿ ಟಿ ಎಸ್ ಗಿರೀಶ್ ಕೆಲವೇ ದಿನಗಳಲ್ಲಿ ಪುರಸಭೆಯ ಎಲ್ಲಾ ಸೇವಾ ಸೌಲಭ್ಯಗಳು ಒಂದೇ ಸೂರಿನಡಿ ಲಭ್ಯವಾಗಲಿವೆ ಎಂದು ತಿಳಿಸಿದ್ದಾರೆ.