ಮಡಿಕೇರಿ, ಜೂ. ೨೫: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಜುಲೈ ೪ ಕೊನೆ ದಿನವಾಗಿದೆ. (ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ)
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಪ್ರವರ್ಗ-೩-ಬಿ ಅಡಿಯಲ್ಲಿ ೨(ಎ) ಯಿಂದ ೨(ಎಫ್)ವರೆಗೆ ಬರುವ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-೩ಬಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು, ಸರ್ಕಾರಿ ಸೌಲಭ್ಯವನ್ನು (ಸಾಲ-ಸಹಾಯಧನ) ಪಡೆಯುವ ಸಂಬAಧ ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ. ೩೩, ವಿಕಲಚೇತನರಿಗೆ ಶೇ. ೫ ಹಾಗೂ ತೃತೀಯ ಲಿಂಗಳಿಗೆ ಶೇ.೧ ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)
ಶ್ರೀ ಶಹಜೀರಾಜೇ ಸಮೃದ್ಧಿ ಯೋಜನೆ (ಸ್ವಯಂ ಉದ್ಯೋಗ ನೇರಸಾಲ ಮತ್ತು ಸಹಾಯಧನ) ಯೋಜನೆಯ ಅರ್ಹತೆಗಳು ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಕನಿಷ್ಟ ರೂ. ೧ ಲಕ್ಷಗಳಿಂದ ಗರಿಷ್ಠ ರೂ. ೨ ಲಕ್ಷಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ. ೧೫ರಷ್ಟು ಕನಿಷ್ಟ ರೂ. ೨೦ ಸಾವಿರಗಳಿಂದ ಗರಿಷ್ಠ ರೂ. ೩೦ ಸಾವಿರಗಳವರೆಗೆ ಸಹಾಯಧನ ಹಾಗೂ ಶೇ. ೮೫ ರಷ್ಟು ಸಾಲವನ್ನು ವಾರ್ಷಿಕ ಶೇ. ೪ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು, ೨ ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು ೩೪ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಜೀಜಾವುಜಲ ಭಾಗ್ಯಯೋಜನೆಯ (ಗಂಗಾ ಕಲ್ಯಾಣ ನೀರಾವರಿ ಯೋಜನೆ) ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ. ೯೮ ಸಾವಿರಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟಿರಬೇಕು. ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಟ ೨ ಎಕರೆ ಹಾಗೂ ಗರಿಷ್ಠ ೫ ಎಕರೆ ಜಮೀನು ಹೊಂದಿರಬೇಕು. ಕನಿಷ್ಟ ೧ ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಈ ಯೋಜನೆಯಲ್ಲಿ ಘಟಕ ವೆಚ್ಚ ರೂ. ೩.೭೫ ಲಕ್ಷಗಳು (ವಿದ್ಯುದ್ದೀಕರಣ ಸೇರಿ) ಹಾಗೂ ಅವಶ್ಯವಿದ್ದಲ್ಲಿ ರೂ. ೫೦ ಸಾವಿರಗಳ ಸಾಲವನ್ನು ಶೇ. ೪ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು.
ಅರಿವು ಶೈಕ್ಷಣಿಕ ಸಾಲ ಯೋಜನೆಯ (ಈಡಿesh Sಣuಜeಟಿಣs) ಅರ್ಹತೆಗಳು: ಈ ಯೋಜನೆಯಲ್ಲಿ ಸಿ.ಇ.ಟಿ.(ಅಇಖಿ)/ನೀಟ್ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಮರಾಠ ಸಮುದಾಯಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ. ೧,೦೦,೦೦೦/-ಗಳ ಸಾಲವನ್ನು ಶೇ.೨ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ ೬ ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು ೩೬ ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ೧) ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೩೦ ವರ್ಷದ ಒಳಗಿನವರಾಗಿರಬೇಕು. ೨) ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. ೩.೫೦ ಲಕ್ಷಗಳ ಮಿತಿಯೊಳಗಿರಬೇಕು
ಅರಿವು ಶೈಕ್ಷಣಿಕ ಸಾಲ ಯೋಜನೆಯ ನವೀಕರಣ: ೨೦೨೨-೨೩, ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ೨೦೨೫-೨೬ನೇ ಸಾಲಿಗೆ ೨, ೩ ಮತ್ತು ೪ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ೨, ೩ ಮತ್ತು ೪ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಕಳೆದವರ್ಷದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸುವುದು.
ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಹೊಸದು): ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ಮರಾಠ ಸಮುದಾಯದ ವಿದ್ಯಾರ್ಥಿಗಳು ವಿದೇಶದಲ್ಲಿನ ಕಿS Woಡಿಟಜ ಖಚಿಟಿಞiಟಿg ೧೦೦೦ ರೊಳಗೆ ಬರುವ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟೋರಲ್ ಪಿಹೆಚ್‌ಡಿ, ಮಾಸ್ಟರ್ ಡಿಗ್ರೀ, ಕೋರ್ಸುಗಳಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯುವ ಅಭ್ಯರ್ಥಿಗಳಿಗೆ ವಾರ್ಷಿಕ ಗರಿಷ್ಟ ರೂ. ೨೫ ಲಕ್ಷ ಅಥವಾ ವಿದ್ಯಾರ್ಥಿಗಳ ಕೋರ್ಸ್ನ ಪೂರ್ಣ ಅವಧಿಗೆ ಗರಿಷ್ಠ ರೂ. ೫೦ ಲಕ್ಷಗಳವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲು ಅರ್ಜಿಗಳನ್ನು ಅಹ್ವಾನಿಸಿದೆ. ೨)ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ. ೧೫ ಲಕ್ಷಗಳ ಮಿತಿಯೊಳಗಿರಬೇಕು.
ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ ನವೀಕರಣ ಅರ್ಹತೆಗಳು: ೨೦೨೪-೨೫ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ ೨೦೨೫-೨೬ನೇ ಸಾಲಿಗೆ ೨ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ೨ನೇ ವರ್ಷದ ವ್ಯಾಸಂಗ ದೃಢೀಕರಣ ಮತ್ತು ಮೊದಲನೇ ವರ್ಷದ ಅಂಕಪಟ್ಟಿಯೊAದಿಗೆ ಅರ್ಜಿ ಸಲ್ಲಿಸುವುದು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶದವರಿಗೆ ರೂ. ೮ ಲಕ್ಷಗಳು ಮೀರತಕ್ಕದಲ್ಲ. ಅರ್ಜಿದಾರರ ವಯಸ್ಸು ಕನಿಷ್ಟ ೧೮ ವರ್ಷಗಳು ಹಾಗೂ ಗರಿಷ್ಠ ೫೫ ವರ್ಷಗಳನ್ನು ಮೀರಿರತಕ್ಕದ್ದಲ್ಲ. ಈ ಯೋಜನೆಯ ಘಟಕ ವೆಚ್ಚ ಗರಿಷ್ಠ ರೂ.೫ ಲಕ್ಷ ಸಾಲ, ರೂ. ೪೦ ಸಾವಿರ ಸಹಾಯಧನ ಆಗಿರುತ್ತದೆ. ಸಾಲವನ್ನು ವಾರ್ಷಿಕ ಶೇ. ೪ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುವುದು. ೩ ವರ್ಷಗಳಲ್ಲಿ ಮಾಸಿಕ ಕಂತುಗಳಲ್ಲಿ ಮಂಜೂರಾತಿ ಆದೇಶದಲ್ಲಿ ನಿಗದಿಪಡಿಸಿರುವಂತೆ ಅಸಲು ಮತ್ತು ಬಡ್ಡಿಯನ್ನು ಮರುಪಾವತಿಸುವುದು.
ಸ್ವಯಂ ಉದ್ಯೋಗ ಸಾಲ ಯೋಜನೆಯ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ): ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೧೮ ವರ್ಷ ಮೇಲ್ಪಟ್ಟು ೫೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಡಿ ಉದ್ಯೋಗ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿAದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಶೇ. ೨೦ ರಷ್ಟು ಅಥವಾ ಗರಿಷ್ಠ ರೂ.೧ ಲಕ್ಷಗಳನ್ನು ನಿಗಮದಿಂದ ಸಹಾಯಧನ ಮಂಜೂರು ಮಾಡಲಾಗುವುದು. ಬ್ಯಾಂಕ್‌ಗಳು ಮಂಜೂರು ಮಾಡುವ ಸಾಲಕ್ಕೆ ಬ್ಯಾಂಕ್‌ಗಳು ಚಾಲ್ತಿಯಲ್ಲಿರುವ ಬಡ್ಡಿಯನ್ನು ವಿಧಿಸಲಾಗುತ್ತದೆ.
ಸ್ವಾವಲಂಬಿ ಸಾರಥಿ ಯೋಜನೆಯ ಅರ್ಹತೆಗಳು: ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. ೯೮ ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ೨೧ ವರ್ಷ ಮೇಲ್ಪಟ್ಟು ೪೫ ವರ್ಷದ ಒಳಗಿನವರಾಗಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘುವಾಹನ ಚಾಲನಾ ಪರವಾನಿಗೆಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿಯಾಗಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯುವ ಫಲಾನುಭವಿಯು ಸ್ವಯಂ ಟ್ಯಾಕ್ಸಿ ಚಾಲನೆ (ಹಳದಿ ಬೋರ್ಡ್) ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನವನ್ನು (ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನ ಇತ್ಯಾದಿ ನಾಲ್ಕು ಚಕ್ರಗಳ ವಾಹನ) ಖರೀದಿಸಲು ಬ್ಯಾಂಕ್/ ಹಣಕಾಸು ಸಂಸ್ಥೆಗಳು ಮಂಜೂರು ಮಾಡಿದ ಸಾಲದ ಶೇ. ೫೦ರಷ್ಟು ಅಥವಾ ಗರಿಷ್ಠ ರೂ. ೩ ಲಕ್ಷಗಳವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳಿAದ ಸಾಲದ ರೂಪದಲ್ಲಿ ಪಡೆಯುವುದು ಈ ಸಾಲಕ್ಕೆ ಬ್ಯಾಂಕ್/ ಹಣಕಾಸು ಸಂಸ್ಥೆಗಳು ನಿಗದಿಪಡಿಸುವ ಬಡ್ಡಿಯನ್ನು ಪಾವತಿಸಬೇಕು.
ಸ್ವಾತಂತ್ರ‍್ಯಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಯ ಅರ್ಹತೆಗಳು: ಮರಾಠ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗಮುಖಿಗಳನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ, ಎಟಿಡಿಸಿ, ವಿಟಿಯು ಹಾಗೂ ಕಾಳಿದಾಸ ಶಿಕ್ಷಣ ಸಂಸ್ಥೆ, ಗದಗ ಇತ್ಯಾದಿ ಸಂಸ್ಥೆಗಳ ಅಲ್ಪಾವಧಿ ಕೋರ್ಸ್ಗಳ ಮೂಲಕ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾAಶದ hಣಣಠಿs://ತಿತಿತಿ.ಞಚಿushಚಿಟಞಚಿಡಿ.ಛಿom ಮೂಲಕ ಅರ್ಜಿ ಅಹ್ವಾನಿಸಿದೆ.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು. ಈ ಎಲ್ಲಾ ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ. ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವುದು, ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ೨೦೨೩-೨೪, ೨೦೨೪-೨೫ನೇ ಸಾಲಿನ ನಿಗದಿತ ಯೋಜನೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಈ ವರ್ಷ ಅರ್ಜಿ ಸಲ್ಲಿಸಬಾರದು. ಸರ್ಕಾರವು ಹಾಗೂ ನಿಗಮವು ಕಾಲಕಾಲಕ್ಕೆ ವಿಧಿಸುವ ಇನ್ನಿತರ ಅರ್ಹತೆ/ ನಿಬಂಧನೆಗಳನ್ನು ಹೊಂದಿದವರಾಗಿರಬೇಕು.
ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: ೮೮೬೭೫೩೭೭೯೯/ ದೂ. ೦೮೦-೨೯೯೦೩೯೯೪ (ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಂಪರ್ಕಿಸಬಹುದಾಗಿದೆ). ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ದೂರವಾಣಿ ಸಂಖ್ಯೆ: ೦೮೨೭೨-೨೨೧೬೫೬ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.