ಬೆಂಗಳೂರು, ಜೂ. ೨೮: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ಮಾಡಿ, ಕೆ. ಬಾಡಗ ಗ್ರಾಮ ಪಂಚಾಯಿತಿ ಕಚೇರಿಗೆ ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವನ್ನು ಪಂಚಾಯಿತಿಯಲ್ಲಿ ಲಭ್ಯವಿರುವ ಹಣದಲ್ಲಿ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಕೆ. ಬಾಡಗ ಪಂಚಾಯಿತಿ ಅಧ್ಯಕ್ಷ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯ ಸಿ.ಡಿ. ಬೋಪಣ್ಣ ಇದ್ದರು.