ಕೂಡಿಗೆ, ಜೂ. ೨೭: ಜಿಲ್ಲೆಯ ಪ್ರಮುಖ ಅಣೆಕಟ್ಟೆಯಾದ ಹಾರಂಗಿ ಅಣೆಕಟ್ಟೆಯು ಬಹುತೇಕ ಭರ್ತಿಯಾಗಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜ್ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ ಅಣೆಕಟ್ಟೆಯ ನೀರಿನ ಸಂಗ್ರಹದ ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದರು
ನಂತರ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ ಉತ್ತಮ ವಾಗಿ ಮಳೆ ಬೀಳುತ್ತಿರುವ ಹಿನ್ನೆಲೆ ಹಾರಂಗಿ ಅಣೆಕಟ್ಟೆಗೆ ಒಳಹರಿವಿನ ಪ್ರಮಾಣವು ಹೆಚ್ಚಾಗುತ್ತಿದೆ. ಅಣೆಕಟ್ಟೆಯ ಭದ್ರತಾ ಹಿತದೃಷ್ಟಿಯಿಂದ ನೀರಾವರಿ ಇಲಾಖೆಯ ನಿಯಮಾನುಸಾರ ನೀರನ್ನು ಸಂಗ್ರಹ ಮಾಡಿ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದರು.
ಈಗಾಗಲೇ ಹಾರಂಗಿ ಅಣೆಕಟ್ಟೆಯ ಅಭಿವೃದ್ಧಿ ಸಂಬAಧಿಸಿದAತೆ ಮತ್ತು ಅಣೆಕಟ್ಟೆಯ ಮುಂಭಾಗದಲ್ಲಿ ನೂತನ ತಂತ್ರಜ್ಞಾನ ಸೇತುವೆಯ ನಿರ್ಮಾಣಕ್ಕೆ ಸಂಬAಧಿಸಿದAತೆ ಎಲ್ಲಾ ಪ್ರಕ್ರಿಯೆ ನಡೆದಿದ್ದು, ಮುಂದಿನ ದಿನಗಳಲ್ಲಿ ಹಣಕಾಸು ಇಲಾಖೆಯ ಮುಖೇನ ಕಾಮಗಾರಿಯ ಕ್ರಿಯಾ ಯೋಜನೆ ಸಿದ್ಧಗೊಂಡ ತಕ್ಷಣವೇ ನೂತನ ಸೇತುವೆ ನಿರ್ಮಾಣ ಮತ್ತು ಅಣೆಕಟ್ಟೆಯ ಅಭಿವೃದ್ಧಿಗೆ ಪೂರಕವಾದ ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಕೂಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಕೆ.ಪಿ.ಸಿ.ಸಿ. ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕುಶಾಲನಗರ ತಾಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಐ.ಕೆ. ಪುಟ್ಟಸ್ವಾಮಿ, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಣಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಶೇಖರ್ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು, ಅಧಿಕಾರಿ ವರ್ಗದವರು ಹಾಜರಿದ್ದರು.