ಮಡಿಕೇರಿ, ಜೂ. ೨೭: ಪ್ರಸಕ್ತ ಸಾಲಿಗೆ ಕೊಡಗು ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪಿಯುಸಿ. ಮತ್ತು ಐಟಿಐ ಹಾಗೂ ಡಿಪ್ಲೊಮೊ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ತಾ. ೩೦ ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ: hಣಣಠಿs://shಠಿ.ಞಚಿಡಿಟಿಚಿಣಚಿಞಚಿ.gov.iಟಿ/bಛಿತಿಜ

ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧, ಎಸ್.ಸಿ. ಮತ್ತು ಎಸ್.ಟಿ. ರೂ. ೨.೫೦ ಲಕ್ಷ, ಪ್ರವರ್ಗ-೨ಎ, ೨ಬಿ, ೩ಎ, ೩ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೧ ಲಕ್ಷ ಆಗಿರುತ್ತದೆ.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ/ ಅನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿಗಳವರ ಕಚೇರಿ ಮತ್ತು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಮೊಬೈಲ್ ಸಂಖ್ಯೆ ಜಿಲ್ಲಾ ಕಚೇರಿ ಮಡಿಕೇರಿ ದೂ. ೦೮೨೭೨-೨೯೫೬೨೮, ಮಡಿಕೇರಿ ತಾಲೂಕು ಕಚೇರಿ ಮೊ. ೮೭೬೨೪೭೬೭೯೦, ವೀರಾಜಪೇಟೆ ತಾಲೂಕು ಕಚೇರಿ ಮೊ. ೯೪೪೮೨೦೫೯೧೯ ಮತ್ತು ಸೋಮವಾರಪೇಟೆ ತಾಲೂಕು ಕಚೇರಿ ಮೊ. ೯೪೮೧೭೭೨೧೪೩ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.