ಮಡಿಕೇರಿ, ಜೂ. ೨೭: ಕೆ.ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ್ಣಂಗೇರಿ ಗ್ರಾಮದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ೩ಡಿ ಕಿರು ತಾರಾಲಯ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಭೋಸರಾಜು ಭೂಮಿಪೂಜೆ ನೆರವೇರಿಸಿದರು.
೭.೧೦ ಎಕರೆ ಜಾಗದಲ್ಲಿ ಒಟ್ಟು ರೂ. ೧೨ ಕೋಟಿ ವೆಚ್ಚದಲ್ಲಿ ಕೇಂದ್ರ ನಿರ್ಮಾಣಕ್ಕೆ ಉದ್ದೇಶಿಸಲಾಗಿದೆ. ಯೋಜನೆಯ ಕುರಿತು ಮಾಹಿತಿ ಪಡೆದ ಸಚಿವರು ಗುಣಮಟ್ಟದಿಂದ ಕಾಮಗಾರಿ ನಡೆಸುವಂತೆ ನಿರ್ದೇಶನ ನೀಡಿದರು.
ಈ ಸಂದರ್ಭ ಮುಖ್ಯಮಂತ್ರಿ ಕಾನೂನು ಸಲಹೆಗಾರ, ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಸರಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಉಪವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಗ್ರಾ.ಪಂ. ಸದಸ್ಯರುಗಳಾದ ನೇತ್ರ, ಜಾನ್ಸನ್ ಪಿಂಟೋ ಸೇರಿದಂತೆ ಇನ್ನಿತರರು ಹಾಜರಿದ್ದರು.