ಕೂಡಿಗೆ, ಜೂ. ೨೭: ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಮನವಿ ಮೇರೆಗೆ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿರುವ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ, ಅಪಾಯದಂಚಿನಲ್ಲಿರುವ ತೂಗು ಸೇತುವೆಯ ಪರಿಶೀಲನೆ ನಡೆಸಿ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು.

ಜೊತೆಯಲ್ಲಿ ತೂಗು ಸೇತುವೆಯು ಸಂಪೂರ್ಣವಾಗಿ ಅಪಾಯಕಾರಿ ಯಾಗಿರುವ ಬಗ್ಗೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.

ನAತರ ಮಾತನಾಡಿದ ಸಚಿವರು; ತೂಗು ಸೇತುವೆ ದುರಸ್ತಿಯ ಬದಲು ಕಾವೇರಿ ನೀರಾವರಿ ನಿಗಮದ ಮೂಲಕ ಶಾಶ್ವತ ಸೇತುವೆ ನಿರ್ಮಾಣ ಮಾಡುವ ಚಿಂತನೆ ವ್ಯಕ್ತಪಡಿಸಿದರು.

ಈ ತೂಗು ಸೇತುವೆಯು ಹೆಚ್ಚಾಗಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ೨೦ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕಕ್ಕೆ ಅನುಕೂಲ ಆಗಿರುವುದರಿಂದ ಮೈಸೂರು ಜಿಲ್ಲೆಯ ಉಸ್ತುವಾರಿ ಹಾಗೂ ಪಶುಪಾಲನಾ ಇಲಾಖೆಯ ಸಚಿವರಾದ ವೆಂಕಟೇಶ ಅವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಶಾಶ್ವತ ಸೇತುವೆ ನಿರ್ಮಾಣಕ್ಕೆ ಅನುದಾನ ನೀಡುವಂತೆ ಮಾತಾನಾಡಿದರು. ನಂತರ ಶಾಶ್ವತ ಸೇತುವೆಗೆ ಸಂಬAಧಿಸಿದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸರಕಾರಕ್ಕೆ ಕಳುಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಕುಶಾಲನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕುಶಾಲನಗರ ಕೂಡ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಬಿ. ಸುರೇಶ್, ಕೆ.ಪಿ.ಸಿ.ಸಿ. ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ್, ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ. ಹಮೀದ್, ಕಣಿವೆ ಭಾರಧ್ವಾಜ್ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.