ಕಾವೇರಿ ಆರತಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜೂ. ೨೭: ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದ ಬಳಿ ಉದ್ದೇಶಿತ ಕಾವೇರಿ ಆರತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಅರ್ಜಿದಾರರಾದ ಸುನಂದಾ ಜಯರಾಮ್ ಪರವಾಗಿ ಹಾಜರಾದ ವಕೀಲ ರಾಜಣ್ಣ ಆರ್ ಅವರ ಪ್ರಾಥಮಿಕ ವಾದಗಳನ್ನು ಪರಿಗಣಿಸಿದ ನಂತರ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ನೇತೃತ್ವದ ವಿಭಾಗೀಯ ಪೀಠ, ಎಲ್ಲಾ ಪ್ರತಿವಾದಿಗಳು ಎರಡು ವಾರಗಳಲ್ಲಿ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ನಿರ್ದೇಶಿಸಿದೆ. ಡ್ಯಾಮ್ ಬಳಿ ೧೨೦ ಅಡಿಯ ಕಾವೇರಿ ವಿಗ್ರಹ ಸ್ಥಾಪಿಸಲಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಅದರ ಕಾಮಗಾರಿಗೆ ಯಂತ್ರಗಳನ್ನು ಉಪಯೋಗಿಸಿರುವ ಫೋಟೊ ಸಹ ಸಲ್ಲಿಕೆ ಮಾಡಲಾಗಿದೆ. ಕಾಮಗಾರಿಗೆ ಅಗೆಯುವುದರಿಂದ ಡ್ಯಾಂಗೆ ಹಾನಿಯಾಗುವುದಿಲ್ಲವೇ? ಜಲಾಶಯದ ಸುರಕ್ಷತೆ ಸಮಿತಿಯ ಅನುಮತಿ ಏಕೆ ಪಡೆದಿಲ್ಲ? ಮನರಂಜನಾ ಪಾರ್ಕ್ ಕಾಮಗಾರಿಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆಯೇ? ಕಾವೇರಿ ಪ್ರತಿಮೆ ಸ್ಥಾಪಿಸುವಾಗ ತಜ್ಞರ ಸಲಹೆ ಪಾಲಿಸಲಾಗಿದೆಯೇ ಎಂದು ಸರ್ಕಾರವನ್ನು ಹಾಗೂ ಕಾವೇರಿ ನೀರಾವರಿ ನಿಗಮವನ್ನು ಹೈಕೋರ್ಟ್ ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಸರ್ಕಾರ ಸದ್ಯಕ್ಕೆ ಕಾವೇರಿ ಪ್ರತಿಮೆ ಮಾತ್ರ ಸ್ಥಾಪಿಸಲು ಟೆಂಡರ್ ನೀಡಲಾಗಿದೆ. ಕಾವೇರಿ ಪ್ರತಿಮೆ ಸ್ಥಾಪನೆಗೆ ತಾಂತ್ರಿಕ ತಜ್ಞರ ಅನುಮತಿ ಪಡೆಯಲಾಗಿದೆ. ಮನರಂಜನಾ ಪಾರ್ಕ್ ಟೆಂಡರ್ ಪೂರ್ಣಗೊಂಡಿಲ್ಲವೆAದು ಹೈಕೋರ್ಟ್ಗೆ ತಿಳಿಸಿದೆ. ಈ ಬೆಳವಣಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಮನರಂಜನಾ ಪಾರ್ಕ್ ಹಾಗೂ ಕಾವೇರಿ ಆರತಿ ಯೋಜನೆಗಳಿಗೆ ತುಸು ಹಿನ್ನಡೆಯಾದಂತಾಗಿದೆ.
ದರೋಡೆ ಪ್ರಕರಣ: ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರ ಬಂಧನ
ವಿಜಯಪುರ, ಜೂ. ೨೭: ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ ರೂ. ೫೩.೨೬ ಕೋಟಿ ಮೌಲ್ಯದ ಚಿನ್ನ ಮತ್ತು ನಗದು ದರೋಡೆ ಪ್ರಕರಣಕ್ಕೆ ಸಂಬAಧಿಸಿದAತೆ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ವಿಜಯಕುಮಾರ್ ಮಿರಿಯಾಲ (೪೧) ಮತ್ತು ಅವರ ಸಹಚರರಾದ ಚಂದ್ರಶೇಖರ್ ನೇರೆಲ್ಲಾ (೩೮) ಹಾಗೂ ಸುನಿಲ್ ನರಸಿಂಹಲು ಮೋಕಾ (೪೦) ಎಂದು ಗುರುತಿಸಲಾಗಿದೆ. ಕಳೆದ ಮೇ ೨೫ ರಂದು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿರುವ ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಲ್ಲಿ ದರೋಡೆ ನಡೆದಿದ್ದು, ಇಲ್ಲಿ ಮಿರಿಯಾಲ ಈ ಹಿಂದೆ ಶಾಖಾ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ಬ್ಯಾಂಕ್ ಲಾಕರ್‌ನಿಂದ ರೂ. ೫೩.೨೬ ಕೋಟಿ ಮೌಲ್ಯದ ೫೮.೯೭ ಕೆ.ಜಿ. ಚಿನ್ನಾಭರಣ ಮತ್ತು ರೂ. ೫.೨ ಲಕ್ಷ ನಗದು ಕಳವು ಮಾಡಲಾಗಿದೆ ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರು ತಿಳಿಸಿದ್ದಾರೆ. "ಈ ಪ್ರಕರಣದಲ್ಲಿ, ಪ್ರಸ್ತುತ ಕೆನರಾ ಬ್ಯಾಂಕ್‌ನ ಹುಬ್ಬಳ್ಳಿ ಶಾಖೆಯ ಹಿರಿಯ ವ್ಯವಸ್ಥಾಪಕರಾಗಿರುವ ವಿಜಯಕುಮಾರ್ ಮಿರಿಯಾಲ ಮತ್ತು ಅವರ ಸಹಚರರಾದ ಚಂದ್ರಶೇಖರ ನರಸಿಂಹಲು ಅವರನ್ನು ಬಂಧಿಸಲಾಗಿದೆ" ಎಂದು ನಿಂಬರ್ಗಿ ಹೇಳಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಗಳು ಬ್ಯಾಂಕ್ ದರೋಡೆಗೆ ವ್ಯವಸ್ಥಿತವಾಗಿ ಸಂಚು ರೂಪಿಸಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ಅವರು ದರೋಡೆಗೆ ಸಂಚು ರೂಪಿಸಿದ್ದರು. ಆದರೆ ಅನುಮಾನ ಬರಬಾರದು ಎಂಬ ಕಾರಣಕ್ಕೆ ಮಿರಿಯಾಲ ಅವರನ್ನು ಮನಗುಳಿ ಶಾಖೆಯಿಂದ ವರ್ಗಾವಣೆ ಮಾಡುವವರೆಗೆ ಕಾಯುತ್ತಿದ್ದರು. ಮೇ ೯ ರಂದು ವಿಜಯಪುರ ಜಿಲ್ಲೆಯ ರೋನಿಹಾಲ್ ಶಾಖೆಗೆ ಮಿರಿಯಾಲ ವರ್ಗಾವಣೆಯಾದ ನಂತರ, ಬ್ಯಾಂಕಿನ ಸೇಫ್ ಡಿಪಾಸಿಟ್ ಲಾಕರ್‌ಗಳ ಕೀಲಿಗಳನ್ನು ತನ್ನ ಸಹಚರರಿಗೆ ಹಸ್ತಾಂತರಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಕಲಿ ಕೀಲಿಗಳನ್ನು ಬಳಸಿ, ಮೂವರು ದರೋಡೆ ನಡೆಸಿದ್ದಾರೆ ಮತ್ತು ಹೊರಗಿನವರು ಭಾಗಿಯಾಗಿದ್ದಾರೆ ಎಂದು ತನಿಖಾಧಿಕಾರಿಗಳು ನಂಬುವAತೆ ಮಾಡಲು ಬ್ಯಾಂಕಿನ ಬಳಿ "ಮಾಟಮಂತ್ರದ ಸಾಮಗ್ರಿಗಳನ್ನು" ಇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಾಧಕ್ಕೆ ಬಳಸಲಾದ ಎರಡು ಕಾರುಗಳನ್ನು ಮತ್ತು ವಾಹನಗಳಲ್ಲಿ ಸಾಗಿಸಲಾಗುತ್ತಿದ್ದ ೧೦.೫ ಕೆಜಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆAಗಳೂರಿನಲ್ಲಿ ೬೦ ಸಾವಿರ ಪ್ರೇಕ್ಷಕರ ಸ್ಥಳಾವಕಾಶದ ನೂತನ ಸ್ಟೇಡಿಯಂ
ಬೆAಗಳೂರು, ಜೂ. ೨೭: ೬೦ ಸಾವಿರ ಪ್ರೇಕ್ಷಕರು ಕುಳಿತುಕೊಳ್ಳುವಂತಹ ನೂತನ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು ಇದಕ್ಕಾಗಿ ೫೦ ಎಕರೆ ಜಾಗ ಗುರುತಿಸಲಾಗಿದೆ. ಕಾವೇರಿ ೫ನೇ ಹಂತದ ಯೋಜನೆ ಪೂರ್ಣಗೊಳಿಸಿ ೧೧೦ ಹಳ್ಳಿಗಳಿಗೆ ನೀರು ನೀಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬಾಬು ಜಗಜೀವನ್ ರಾಮ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ ೫೧೬ನೇ ಜಯಂತಿಯ ಅಂಗವಾಗಿ ನಡೆದ ನೂತನ ‘ಕೆಂಪೇಗೌಡ ಭವನ’ ಭೂಮಿಪೂಜೆ ಹಾಗೂ ಕೆಂಪೇಗೌಡ ಅಂತರರಾಷ್ಟಿçÃಯ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ೬ನೇ ಹಂತದ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬೆಂಗಳೂರಿನ ಅಭಿವೃದ್ಧಿಗೆ ಬೇಕಾದಷ್ಟು ಶ್ರಮ ಪಡುತ್ತಿದ್ದೇವೆ. ಸಿಕ್ಕಿರುವ ಅವಕಾಶದಲ್ಲಿ ಸಾಕ್ಷಿಗುಡ್ಡೆ ನಿರ್ಮಾಣ ಮಾಡಲಾಗುವುದು” ಎಂದರು. ಹುಟ್ಟಿದಾಗ ಭೂಮಿ ಮೇಲಿರುತ್ತೇವೆ. ಸತ್ತಾಗ ಭೂಮಿ ಕೆಳಗಿರುತ್ತೇವೆ. ಆದರೆ ನಮ್ಮ ಸಾಧನೆಗಳು ಮೇಲಿರುತ್ತವೆ. ಅದೇ ರೀತಿ ಕೆಂಪೇಗೌಡರ ಸಾಧನೆಗಳು ಶಾಶ್ವತ. ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗರಾಗಿ ಆದರೆ ಬದುಕು ನಡೆಸಿದ್ದು, ಸಮಾಜಕ್ಕೆ ಸಂದೇಶ ನೀಡಿದ್ದು ವಿಶ್ವಮಾನವರಾಗಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. “ವಿಶ್ವದೆಲ್ಲೆಡೆ ಬೆಂಗಳೂರಿನ ಕೀರ್ತಿ ಹರಡಿದೆ. ಈ ನಗರದ ಅಭಿವೃದ್ಧಿಗೆ ಕೆಂಪೇಗೌಡರೇ ಸ್ಫೂರ್ತಿ ಎಂಬುದನ್ನು ನಾವು ಮರೆಯಬಾರದು. ೫೦೦ ವರ್ಷಗಳ ಹಿಂದೆಯೇ ಮಾದರಿ ಆಡಳಿತಕ್ಕೆ ಅಡಿಪಾಯ ಹಾಕಿದವರು. ಎಲ್ಲಾ ಜಾತಿ, ಧರ್ಮಗಳಿಗೆ ಅವಕಾಶ ನೀಡಿ ಸಮಾಜಕ್ಕೆ ಸಂದೇಶ ನೀಡಿದವರು” ಎಂದು ತಿಳಿಸಿದರು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಮೂವರ ಬಂಧನ
ಕೋಲ್ಕತ್ತಾ, ಜೂ. ೨೭: ಕಸ್ಬಾದಲ್ಲಿರುವ ದಕ್ಷಿಣ ಕೊಲ್ಕತ್ತಾ ಕಾನೂನು ಕಾಲೇಜಿನ ಆವರಣದೊಳಗೆ ಕಾನೂನು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂತ್ರಸ್ತೆಯ ದೂರಿನ ಪ್ರಕಾರ, ಈ ಘಟನೆ ಜೂನ್ ೨೫ ಬುಧವಾರ ಸಂಜೆ ೭:೩೦ ರಿಂದ ರಾತ್ರಿ ೧೦:೫೦ ರ ನಡುವೆ ನಡೆದಿದೆ. ಬಂಧಿತರಲ್ಲಿ ಒಬ್ಬರು ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ ಸೆಮಿಸ್ಟರ್ ವಿದ್ಯಾರ್ಥಿಗಳು. ಆರೋಪಿಗಳಲ್ಲಿ ಇಬ್ಬರನ್ನು ಗುರುವಾರ ಸಂಜೆ ಬಂಧಿಸಲಾಗಿದ್ದು, ಮೂರನೆಯವರನ್ನು ಮಧ್ಯರಾತ್ರಿಯ ಸುಮಾರಿಗೆ ಬಂಧಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ಕಾಲೇಜಿನ ಮಾಜಿ ವಿದ್ಯಾರ್ಥಿ ಮನೋಜಿತ್ ಮಿಶ್ರಾ (೩೧) ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ, ಜೈಬ್ ಅಹ್ಮದ್ (೧೯) ಮತ್ತು ಪ್ರಮಿತ್ ಮುಖೋಪಾಧ್ಯಾಯ (೨೦) ಬಂಧಿತ ಆರೋಪಿಗಳಾಗಿದ್ದಾರೆ. ಮನೋಜಿತ್ ಮಿಶ್ರಾ ತೃಣಮೂಲ ಕಾಂಗ್ರೆಸ್‌ನ ವಿದ್ಯಾರ್ಥಿ ವಿಭಾಗವಾದ ತೃಣಮೂಲ ಛತ್ರ ಪರಿಷತ್ ಜೊತೆ ಸಂಬAಧ ಹೊಂದಿದ್ದಾನೆ. ಆತನ ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ಟಿಎಂಸಿಪಿಯ ದಕ್ಷಿಣ ಕೋಲ್ಕತ್ತಾ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಎಂದು ಬರೆದುಕೊಂಡಿದ್ದಾನೆ. ಆತ ಅಲಿಪೋರ್ ನ್ಯಾಯಾಲಯದಲ್ಲಿ ಕ್ರಿಮಿನಲ್ ವಕೀಲನಾಗಿಯೂ ಕಾರ್ಯನಿರ್ವಹಿಸುತ್ತಿದ್ದಾನೆ. ಇತರ ಇಬ್ಬರು ಆರೋಪಿಗಳು ಸಹ ಟಿಎಂಸಿಪಿಯೊAದಿಗೆ ಸಂಬAಧ ಹೊಂದಿದ್ದಾರೆ.