ಬೆAಗಳೂರು, ಜೂ. ೨೭: ಪತ್ನಿ ಜೀವಂತವಾಗಿದ್ದರೂ ಆಕೆಯನ್ನು ಕೊಲೆ ಮಾಡಿರುವ ಸುಳ್ಳು ಆರೋಪದಲ್ಲಿ ಸಿಲುಕಿಸಿ ಜೈಲುವಾಸ ಅನುಭವಿಸುವಂತೆ ಮಾಡಿ ಘನತೆ ಮತ್ತು ಗೌರವಕ್ಕೆ ಹಾನಿಯುಂಟು ಮಾಡಿರುವುದು, ನೆಮ್ಮದಿಯಿಂದ ಬದುಕುವ ಹಕ್ಕಿಗೆ ಅಡ್ಡಿಪಡಿಸಿರುವ ಆರೋಪದಿಂದಾಗಿ ತನ್ನ ಜೀವನಕ್ಕೆ ಅಪಾರ ಹಾನಿ ಆಗಿದ್ದು, ಪರಿಣಾಮ ರೂ. ೫ ಕೋಟಿಗಳ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕುಶಾಲನಗರದ ಬಸವನಳ್ಳಿ ಗ್ರಾಮದ ಬುಡಕಟ್ಟು ಸಮುದಾಯದ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ನಿರಪರಾಧಿಯಾದ ತನಗೆ ಒಂದೂವರೆ ವರ್ಷ ಜೈಲುವಾಸ ಅನುಭವಿಸುವಂತೆ ಮಾಡಿದ್ದರಿಂದಾಗಿ ಸಮಾಜದಲ್ಲಿ ಗೌರವ, ಘನತೆ ಕಳೆದುಕೊಂಡಿದ್ದೇನೆ. ಹೀಗಾಗಿ, ರೂ. ೫ ಕೋಟಿ ಪರಿಹಾರ ಪಾವತಿಸಬೇಕು ಮತ್ತು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮಕೈಗೊಳ್ಳಬೇಕು. ಸತ್ರ ನ್ಯಾಯಾಲಯದ ತೀರ್ಪಿನಲ್ಲಿ ಆರೋಪಿಪದ ತೆಗೆದು, ಸಂತ್ರಸ್ತ ಎಂದು ಸೇರ್ಪಡೆ ಮಾಡಬೇಕು ಎಂದು ಕೋರಿದ್ದಾರೆ. ವಿನಾಕಾರಣ ಜೈಲು ಶಿಕ್ಷೆ ಅನುಭವಿಸಿದ್ದರ ಪರಿಣಾಮ ವಿಚಾರಣಾ ನ್ಯಾಯಾಲಯ ಒಂದು ಲಕ್ಷ ರೂಪಾಯಿಗಳ ಪರಿಹಾರ ನೀಡಲು ಆದೇಶ ನೀಡಿದೆ. ಆದರೆ ಈ ಪರಿಹಾರ ಅತ್ಯಂತ ಕನಿಷ್ಟವಾಗಿದೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಆಧಾರ ರಹಿತವಾದ ನಕಲಿ ಆರೋಪಪಟ್ಟಿ ಸಲ್ಲಿಸಿದ ಬಳಿಕವೂ ವಿಚಾರಣಾಧೀನ ನ್ಯಾಯಾಲಯವು ತನ್ನನ್ನು ಸಂತ್ರಸ್ತ ಎಂದು ಪರಿಗಣಿಸಲು ವಿಫಲವಾಗಿದೆ. ತನ್ನ ವಿರುದ್ಧ ಆರೋಪ ನಿಗದಿ ಮಾಡಿರುವುದಕ್ಕೆ ಅನ್ವಯವಾಗಿ ವಿಚಾರಣೆ ಪೂರ್ಣಗೊಳಿಸದೇ ವಿಚಾರಣಾಧೀನ ನ್ಯಾಯಾಲಯವು ೨೦೨೫ರ ಏಪ್ರಿಲ್ ೨೩ ರಂದು ತನ್ನನ್ನು ಖುಲಾಸೆಗೊಳಿಸಿದ್ದು, ಇದು ಕಾನೂನಿನ ಅಡಿ ಊರ್ಜಿತವಾಗುವುದಿಲ್ಲ ಎಂದು ಆಕ್ಷೇಪಿಸಿದ್ದಾರೆ.

ಪತ್ನಿಯನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬAಧಿಸಿದAತೆ ಬುಡಕಟ್ಟು ಸಮುದಾಯದ ಅರ್ಜಿದಾರ ಸುರೇಶ್ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ ೪೯೮ಎ (ಕ್ರೌರ್ಯ), ೩೦೨ (ಕೊಲೆ) ಮತ್ತು ೨೦೧ (ಸಾಕ್ಷಿಗಳ ತಿರುಚುವಿಕೆ) ಅಡಿ ಸಕ್ಷಮ ನ್ಯಾಯಾಲಯಕ್ಕೆ ಮೈಸೂರಿನ ಬೆಟ್ಟದಪುರ ಪೊಲೀಸರು ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದರು.

ಕುಶಾಲನಗರದ ಗ್ರಾಮೀಣ ಠಾಣೆಯ ವ್ಯಾಪ್ತಿಗೆ ಬರುವ ಬಸವನಹಳ್ಳಿಯಿಂದ ಪತ್ನಿ ಮಲ್ಲಿಗೆ ನಾಪತ್ತೆಯಾಗಿದ್ದಾರೆ ಎಂದು ಸುರೇಶ್ ದೂರು ನೀಡಿದ್ದರು. ಆದರೆ, ಮಹಿಳೆಯ ಮೂಳೆಗಳು ಪತ್ತೆಯಾಗಿರುವುದನ್ನು ಆಧರಿಸಿ ನೆರೆಯ ಬೆಟ್ಟದಪುರ ಠಾಣೆಯ ಪೊಲೀಸರು ಸುರೇಶ್ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದರು. ವಂಶವಾಹಿ ವರದಿಯಲ್ಲಿ ಮಲ್ಲಿಗೆಗೂ ಮತ್ತು ಪೊಲೀಸರು ಜಪ್ತಿ ಮಾಡಿದ್ದ ಮೂಳೆಗೂ ಯಾವುದೇ ಸಾಮ್ಯತೆ ಕಂಡುಬAದಿರಲಿಲ್ಲ. ಆದರೂ, ಪತ್ನಿಯ ಶೀಲ ಶಂಕಿಸಿ ಆಕೆಯ ಮೇಲೆ ಮಾನಸಿಕ ಮತ್ತು ದೈಹಿಕ ದೌರ್ಜನ್ಯ ಎಸಗಿದ್ದಲ್ಲದೇ ೨೦೨೦ರ ಅಕ್ಟೋಬರ್ ೧೯ ರಂದು ಕೊಲೆ ಮಾಡಲಾಗಿದೆ. ಆನಂತರ ಶವ ಮತ್ತು ಕೊಲೆಗೆ ಬಳಸಿದ ಶಸ್ತಾçಸ್ತçಗಳನ್ನು ಬಚ್ಚಿಡಲಾಗಿತ್ತು ಎಂದು ಎಫ್‌ಐಆರ್‌ನಲ್ಲಿ ಸುರೇಶ್ ವಿರುದ್ಧ ಆರೋಪಿಸಲಾಗಿತ್ತು.

ಈ ನಡುವೆ ಸುರೇಶ್ ಪತ್ನಿ ಮಡಿಕೇರಿಯಲ್ಲಿ ಪರ ಪುರುಷನೊಂದಿಗೆ ರೆಸ್ಟೋರೆಂಟ್‌ನಲ್ಲಿ ತಿಂಡಿ ತಿನ್ನುವಾಗ ಮಲ್ಲಿಗೆ ಜೀವಂತವಾಗಿದ್ದಾಳೆ ಎನ್ನುವ ವಿಚಾರ ಆನಂತರ ಬಹಿರಂಗವಾಗಿತ್ತು. ಇದನ್ನು ಆದರಿಸಿ, ಕೊಲೆ ಪ್ರಕರಣದಲ್ಲಿ ಸುರೇಶ ಅವರನ್ನು ಗೌರವ ಯುತವಾಗಿ ಖುಲಾಸೆಗೊಳಿಸಿದ್ದ ವಿಚಾರಣಾಧೀನ ನ್ಯಾಯಾಲಯವು ಪೊಲೀಸ್ ದಾಖಲೆಯಿಂದ ಸುರೇಶ್ ಹೆಸರು ತೆಗೆಯುವಂತೆ ಬೆಟ್ಟದಪುರ ಪೊಲೀಸರಿಗೆ ನಿರ್ದೇಶಿಸಿತ್ತು. ಅಲ್ಲದೇ, ಸುರೇಶ್‌ಗೆ ಒಂದು ಲಕ್ಷ ರೂಪಾಯಿ ಪರಿಹಾರ ಪಾವತಿಸುವಂತೆ ಗೃಹ ಇಲಾಖೆಗೆ ಆದೇಶಿಸಿತ್ತು.

ಅಲ್ಲದೇ, ದಾಖಲೆಗಳು ಮತ್ತು ಸಾಕ್ಷಿ ತಿರುಚಿದ್ದಕ್ಕಾಗಿ ಬೆಟ್ಟದಪುರ ಠಾಣೆಯ ಇನ್ಸ್ಪೆಕ್ಟರ್ ಬಿ.ಜಿ. ಪ್ರಕಾಶ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಆದೇಶಿಸಿತ್ತು. ಇದರ ಜೊತೆಗೆ ಡಿವೈಎಸ್ಪಿ ಜಿತೇಂದ್ರ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ಪ್ರಕಾಶ್ ಯಟ್ಟಿಮಣಿ ಮತ್ತು ಬಿ.ಜಿ. ಮಹೇಶ್ ಹಾಗೂ ಪ್ರಕಾಶ್ ಬಿ.ಜಿ. ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಿತ್ತು. ಇದೀಗ ಸುರೇಶ್ ೫ ಕೋಟಿ ಪರಿಹಾರ ಕೋಠಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

- ಕೋವರ್‌ಕೊಲ್ಲಿ ಇಂದ್ರೇಶ್