ಮಡಿಕೇರಿ, ಜೂ. ೨೮: ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕ್ರಮ ಹಾಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷÀ ಮಂಜುನಾಥ್ ಗೌಡ ಅವರ ಪ್ರವಾಸದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕÀ ಎ.ಎಸ್. ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಮೈಸಿ ಕತ್ತಣಿರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಮ್ಮಡ ಸೋಮಣ್ಣ ಮತ್ತಿತರರು ಇದ್ದರು.