ನಾಪೋಕ್ಲು, ಜೂ. ೨೯: ಸ್ಥಳೀಯ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾ ರಂಭ ಜುಲೈ ೧ ರಂದು ಇಲ್ಲಿನ ಕೊಡವ ಸಮಾಜದಲ್ಲಿ ನಡೆಯಲಿದೆ.

ನಾಪೋಕ್ಲು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿರುವ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಜರು ಗಲಿರುವ ಕಾರ್ಯಕ್ರಮದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಎಂ.ಬಿ. ಕುಟ್ಟಪ್ಪ ಹಾಗೂ ಲಿಯೋ ಕ್ಲಬ್ ನೂತನ ಅಧ್ಯಕ್ಷರಾಗಿ ಕನ್ನಿಕ ಹಾಗೂ ಇತರ ಪದಾಧಿಕಾರಿಗಳು ಪದಗ್ರಹಣ ಸ್ವೀಕರಿಸಲಿದ್ದಾರೆ. ಲಯನ್ಸ್ ಜಿಲ್ಲಾ ಗವರ್ನರ್ ಹೆಚ್.ಎಂ. ತಾರಾನಾಥ್ ಪದಗ್ರಹಣ ನೆರವೇರಿಲಿದ್ದಾರೆ. ಈ ಸಂದರ್ಭ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಲಯನ್ಸ್ ಕ್ಲಬ್ ಪ್ರಕ ಟಣೆಯಲ್ಲಿ ತಿಳಿಸಿದೆ.