ಸುಂಟಿಕೊಪ್ಪ, ಜೂ. ೨೮: ಹಿಂದಿನ ಕಾಲದಲ್ಲಿ ನಾವುಗಳು ವನ್ಯಪ್ರಾಣಿಗಳನ್ನು ಪ್ರಾಣಿ ಸಂಗ್ರಹಾಲಯ, ಸರ್ಕಸ್, ಸಿನಿಮಾ ಅಥವಾ ಅರಣ್ಯಕ್ಕೆ ತೆರಳಿ ನೋಡಬೇಕಿದ್ದು ಇತ್ತೀಚಿನ ವರ್ಷಗಳಲ್ಲಿ ಆಧುನಿಕತೆಯ ಭರಾಟೆಯಲ್ಲಿ ಪರಿಸರವನ್ನು ವಿನಾಶಗೊಳಿಸುತ್ತಿರುವುದೇ ವನ್ಯಪ್ರಾಣಿಗಳು ನಾಡಿನಲ್ಲೇ ಕಾಣುವಂತಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿ ಪುರುಷೋತ್ತಮ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಕಾನ್‌ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾವರಣದಲ್ಲಿ ಗಿಡಗಳನ್ನು ನೆಡುವ ಸಮಾರಂಭದಲ್ಲಿ ಮುಖ್ಯ ಭಾµಣಕಾರರಾಗಿ ಆಗಮಿಸಿ ಮಾತನಾಡಿದ ಅವರು, ಪರಿಸರವನ್ನು ಉಳಿಸಿ ಬೆಳೆಸಬೇಕಾದ ನಾವುಗಳು, ಪರಿಸರ ನಾಶಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ಕಾಡು ಪ್ರಾಣಿಗಳು ಆಹಾರ ಅರಸಿ ನಾಡಿನತ್ತ ಮುಖ ಮಾಡುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದುದ್ದರಿಂದ ನಾವುಗಳು ನಮ್ಮ ಸುತ್ತಮುತ್ತಲಿನಲ್ಲಿ ಪ್ರಕೃತಿಯನ್ನು ಉಳಿಸಿ ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕೆAದು ಅವರು ಹೇಳಿದರು.

ಇಂದಿನ ದಿನಗಳಲ್ಲಿ ವಾರ್ಷಿಕವಾಗಿ ಸರಕಾರ ಮತ್ತು ಅರಣ್ಯ ಇಲಾಖೆ ಸೇರಿದಂತೆ ಇತರೆ ಇಲಾಖೆಯವರು ಸೇರಿ ಲಕ್ಷಾಂತರ ಗಿಡಗಳನ್ನು ನೆಡುವ ಮೂಲಕ ಸರಕಾರಕ್ಕೆ ಲೆಕ್ಕಪತ್ರವನ್ನು ನೀಡುತ್ತಾರೆ. ಆದರೆ ಎಷ್ಟು ಗಿಡಗಳನ್ನು ಬೆಳೆಸಿದ್ದಾರೆಂದು ಲೆಕ್ಕಪತ್ರವನ್ನು ಬಯಸದೆ ಇರುವುದರಿಂದ ಅರಣ್ಯ ಹಿನ್ನಡೆಗೆ ಕಾರಣವಾಗಿದೆ. ಸರಕಾರವು ವಾರ್ಷಿಕವಾಗಿ ನೆಟ್ಟ ಗಿಡಗಳ ಆರೈಕೆ ಲೆಕ್ಕವನ್ನು ತೆಗೆದುಕೊಳ್ಳುವ ಮೂಲಕ ಅರಣ್ಯವನ್ನು ವಾರ್ಷಿಕವಾಗಿ ಹೆಚ್ಚಿಸಬಹುದೆಂದು ಪುರೋಷತ್ತಮ್ ಅಭಿಪ್ರಾಯ ವ್ಯಕ್ತಪಡಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ನಾಕೂರು - ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂದೋಡಿ ಜಗನ್ನಾಥ್ ವಹಿಸಿ ಮಾತನಾಡಿದ ಅವರು, ನಾವುಗಳು ಈಗಿನಿಂದಲೇ ಪರಿಸರವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಪ್ರತಿ ಮನೆಯಲ್ಲೂ ಗಿಡಗಳನ್ನು ನೆಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾನ್‌ಬೈಲ್ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶಾಂತಿ ಮಾತನಾಡಿ, ಶಾಲೆಗಳಲ್ಲಿ ಇಂತಹ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ನೆರವೇರಿಸಿದ್ದಲ್ಲಿ ಯುವಪೀಳಿಗೆ ಪ್ರೇರಣೆಗೊಂಡು ಪರಿಸರಕ್ಕೆ ಮಾದರಿಯಾಗುವ ಸಾಧ್ಯತೆಗಳು ಹೆಚ್ಚಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಜಿಕೆರೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮೂರ್ತಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿನಿ ತಮ್ಮ ತಾಯಿಯಂದಿರ ಹೆಸರಿನಲ್ಲಿ ಸಸಿಗಳನ್ನು ನೆಟ್ಟು ಪೋಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.

ಸಮಾರಂಭದಲ್ಲಿ ನಾಕೂರು - ಶಿರಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸತೀಶ್, ಸುಂಟಿಕೊಪ್ಪ ವಲಯ ಮೇಲ್ವಿಚಾರಕ ಸಂತೋಷ್, ಕಾನ್‌ಬೈಲ್ ಒಕ್ಕೂಟದ ಅಧ್ಯಕ್ಷೆ ಭವ್ಯ, ಪದಾಧಿಕಾರಿಗಳಾದ ಗೀತಾ, ಪುಷ್ಪಲತ, ಅರ್ಚನ, ಸೇವಾ ಪ್ರತಿನಿಧಿ ಯಶೋಧ, ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಸಹಶಿಕ್ಷಕರು ಉಪಸ್ಥಿತರಿದ್ದ