ಕುಶಾಲನಗರ, ಜೂ. ೨೮: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಪ್ರಮಾಣ ಕ್ಷೀಣಗೊಂಡ ಕಾರಣ ಕುಶಾಲನಗರ ವ್ಯಾಪ್ತಿಯಲ್ಲಿ ಉಕ್ಕಿ ಹರಿಯುತ್ತಿದ್ದ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಇಳಿಕೆ ಕಂಡಿದೆ. ಕಳೆದ ಮೂರು ದಿನಗಳಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕಾವೇರಿ ಬಹುತೇಕ ಶಾಂತಗೊAಡಿದ್ದು, ನದಿಯ ಎರಡು ಕಡೆ ತಗ್ಗು ಪ್ರದೇಶಗಳಲ್ಲಿ ನೀರು ಇಳಿಕೆ ಕಂಡಿದೆ.
ಕುಶಾಲನಗರ ಕೊಪ್ಪ ಗಡಿಯಲ್ಲಿ ಕಾವೇರಿ ಸೇತುವೆ ಕೆಳಭಾಗದಲ್ಲಿ ಸುಮಾರು ಆರು ಅಡಿಗಳಷ್ಟು ನೀರು ಕಡಿಮೆಯಾಗಿದ್ದು ಆತಂಕಕ್ಕೆ ಒಳಗಾಗಿದ್ದ ನದಿ ತಟದ ಬಡಾವಣೆಗಳ ಜನರು ನಿಟ್ಟುಸಿರು ಬಿಡುವಂತಾಗಿದೆ.