ಕೂಡಿಗೆ, ಜೂ. ೨೮: ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ತಾಲೂಕು ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಮೊದಲಿಗೆ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ವರದಿಯನ್ನು ಓದುವ ಮೂಲಕ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜೊತೆಯಲ್ಲಿ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೋನ್ಮುಖರಾಗಿರುತ್ತಾರೆ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆಗಳು ನಡೆದವು.

ಅಧ್ಯಕ್ಷತೆ ವಹಿಸಿದ್ದ ಬಿ.ಪಿ. ಶಶಿಧರ್ ಮಾತನಾಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹಜ್ಯೋತಿ ಯೋಜನೆ, ಗೃಹಲಕ್ಷಿö್ಮ ಯೋಜನೆ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆಗಳ ಬಗ್ಗೆ ಸಂಬAಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜೊತೆಯಲ್ಲಿ ಯೋಜನೆಯನ್ನು ಎಲ್ಲಾ ಫಲಾನುಭವಿಗಳಿಗೆ ದೊರಕುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಕೆ.ಸಿ. ಭೀಮಯ್ಯ, ತಾಲೂಕು ಸಮಿತಿ ಸದಸ್ಯರಾದ ಕೆ.ಎಸ್. ಕೃಷ್ಣಗೌಡ, ಹೆಚ್.ಎನ್. ರಾಜಶೇಖರ್, ಶ್ರೀನಿವಾಸನ್, ಕುಮಾರ್, ಅಬ್ದುಲ್ ರಜಾಕ್, ರಫೀಕ್ ಖಾನ್, ಆದಂ, ಮಲ್ಲಿಕಾರ್ಜುನ, ಶ್ರೀನಿವಾಸ್, ಸೇರಿದಂತೆ ಕುಶಾಲನಗರ ತಾಲೂಕು ಆಹಾರ ಪರಿವೀಕ್ಷಣಾ ಅಧಿಕಾರಿ ಎಂ.ಎಸ್. ಸ್ವಾತಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ, ಇಲಾಖೆಯ ಅಧಿಕಾರಿ ವರ್ಗದವರು ಹಾಜರಿದ್ದರು.